More

    ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಿ ನ್ಯಾ. ಪ್ರಸನ್ನ ಬಿ. ವರಲೆ

    ಬೆಂಗಳೂರು: ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಲೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ನಿರ್ಧರಿಸಿದೆ.

    ಸಿಜೆಐ ಯು.ಯು.ಲಲಿತ್ ನೇತೃತ್ವದಲ್ಲಿ ಸೆ.28ರಂದು ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಸ್ತಾವವನ್ನು ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಕಳುಹಿಸಲಿದೆ. ನಂತರ ಕೊಲಿಜಿಯಂನ ಶಿಫಾರಸು ಅನುಮೋದಿಸಿ ರಾಷ್ಟ್ರಪತಿಗಳು ಅಧಿಕೃತ ಆದೇಶ ಹೊರಡಿಸಲಿದ್ದಾರೆ.

    ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಿತುರಾಜ್ ಅವಸ್ಥಿ ಕಳೆದ ಜು.2ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಹಿರಿಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು.

    ನ್ಯಾ.ಪಿ.ಬಿ. ವರಲೆ ಹಿನ್ನೆಲೆ: ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ 1962ರ ಜೂ.23ರಂದು ಜನಿಸಿದ ಪ್ರಸನ್ನ ಬಿ.ವರಲೆ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲಾ ಮತ್ತು ಕಾನೂನು ಪದವಿ ಪಡೆದಿದ್ದಾರೆ. 1985ರ ಆ.12ರಂದು ವಕೀಲಿಕೆ ಆರಂಭಿಸಿದ ಅವರು ವಕೀಲರಾದ ಎಸ್.ಎಲ್. ಲೋಯಾ ಕಚೇರಿಗೆ ಸೇರಿ ಸಿವಿಲ್ ಮತ್ತು ಕ್ರಿಮಿನಲ್ ಕೇಸ್‌ಗಳನ್ನು ನಿರ್ವಹಿಸಿದರು. 1990ರಿಂದ 92ವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ಔರಂಗಾಬಾದ್ ಹೈಕೋರ್ಟ್ ಪೀಠದಲ್ಲಿ ಸಹಾಯಕ ಸರ್ಕಾರಿ ಪ್ಲೀಡರ್ ಹಾಗೂ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅವರು, ಕೇಂದ್ರ ಸರ್ಕಾರದ ಪರ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು. 2008ರ ಜು.18ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಪ್ರಸನ್ನ ಬಿ. ವರಲೆ ಕಳೆದ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

    ಭಾರತವನ್ನೇ ತಪ್ಪಾಗಿ ತೋರಿಸಿದ ಶಶಿ ತರೂರ್ ಪ್ರಣಾಳಿಕೆ!; ಜಮ್ಮು-ಕಾಶ್ಮೀರವೇ ಇರದ ನಕಾಶೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts