More

    ಅದಾಲತ್​ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಿ

    ಚಿಕ್ಕಮಗಳೂರು: ಜನರು ಸಣ್ಣಪುಟ್ಟ ಸಮಸ್ಯೆಗಳಿಗೆ ನ್ಯಾಯಾಲಯದಲ್ಲಿ ದಾವೆ ಹೂಡುವ ಮೂಲಕ ಸಮಯ, ಹಣ, ಶಾಂತಿ ಕಳೆದುಕೊಳ್ಳುತ್ತಿದ್ದು, ಇಂಥ ಸಮಸ್ಯೆಗಳಿಂದ ಮುಕ್ತಿಗೆ ರಾಷ್ಟ್ರೀಯ ಲೋಕ ಅದಾಲತ್ ಬಳಸಿಕೊಳ್ಳಬೇಕು ಎಂದು ಹೈಕೋರ್ಟ್ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಚಿಕ್ಕಮಗಳೂರಿನ ಆಡಳಿತಾತ್ಮಕ ನ್ಯಾಯಮೂರ್ತಿ ಆರ್.ದೇವದಾಸ್ ಸಲಹೆ ನೀಡಿದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್​ನಲ್ಲಿ ಮಾತನಾಡಿದ ಅವರು, ಜನರು ರಾಷ್ಟ್ರೀಯ ಲೋಕ ಅದಾಲತ್​ನಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಹೆಚ್ಚಿನ ಆಸಕ್ತಿವಹಿಸಬೇಕು ಎಂದು ತಿಳಿಸಿದರು.

    ಹೈಕೋರ್ಟ್ ನ್ಯಾಯಾಲಯದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಮಾತನಾಡಿ, ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಇತ್ಯರ್ಥವಾಗದೆ ಉಳಿದ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಅತ್ಯುತ್ತಮ ವೇದಿಕೆ. ಇದುವರೆಗೂ ಬಾಕಿ ಇದ್ದ ವ್ಯಾಜ್ಯಗಳನ್ನು ಲೋಕ ಅದಾಲತ್​ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ವಕೀಲರು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಸಲಹೆ ನೀಡಿದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಶುಭಾ ಗೌಡರ್ ಮಾತನಾಡಿ, ರಾಷ್ಟ್ರೀಯ ಲೋಕ ಅದಾಲತ್​ನಲ್ಲಿ ರಾಜಿ ಸಂಧಾನಗಳನ್ನು ಇತ್ಯರ್ಥಪಡಿಸಲು ಜಿಲ್ಲೆಯಲ್ಲಿ 22 ಘಟಕಗಳು ಮತ್ತು ಚಿಕ್ಕಮಗಳೂರಲ್ಲಿ 9 ಘಟಕಗಳನ್ನು ತೆರೆಯಲಾಗಿದೆ ಎಂದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ ಚೇಂಗಟಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಟಿ.ಥಾಮಸ್, ವಕೀಲ ಡಿ.ಬಿ.ಸುಜೇಂದ್ರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts