More

    ನ್ಯಾಯಾಂಗವು ಸಂವಿಧಾನದ ಅವಿಭಾಜ್ಯ ಅಂಗ

    ಲಿಂಗಸುಗೂರು: ಪಟ್ಟಣದಲ್ಲಿ ಸಂಚಾರಿ ಪೀಠ ಸ್ಥಾಪನೆಯಿಂದ ನ್ಯಾಯವಾದಿಗಳಿಗೆ ಜ್ಞಾನವೃದ್ಧಿ ಜತೆಗೆ ಕಕ್ಷಿದಾರರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಉಚ್ಛ ನ್ಯಾಯಾಲಯದ ಆಡಳಿತಾತ್ಮಕ ನ್ಯಾಯಮೂರ್ತಿ ರವಿ ವಿ.ಹೊಸಮನಿ ಹೇಳಿದರು.

    ಪಟ್ಟಣದಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಂಚಾರಿ ಪೀಠ ಉದ್ಘಾಟಿಸಿ ಶನಿವಾರ ಮಾತನಾಡಿದರು.

    ಸಂವಿಧಾನ ಸಮಾಜದ ಹಿತ ಕಾಪಾಡಿದರೆ, ನ್ಯಾಯಾಂಗವು ಸಂವಿಧಾನದ ಅವಿಭಾಜ್ಯ ಅಂಗವೆನಿಸಿದೆ. ಜನಸಾಮಾನ್ಯರಲ್ಲಿ ಕಾನೂನು ಅರಿವು ಮೂಡಿದಾಗ ಹಕ್ಕು ಪಡೆಯಲು ಸಾಧ್ಯ ಮತ್ತು ವ್ಯಾಜ್ಯ ಇತ್ಯರ್ಥ ಪಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.

    ಸಂಚಾರಿ ಪೀಠ ಸ್ಥಾಪನೆಯಿಂದ ಜಿಲ್ಲಾ ಕೇಂದ್ರದ ನ್ಯಾಯಾಲಯಗಳಿಗೆ ಅಲೆಯುವುದು ತಪ್ಪಲಿದೆ. ವ್ಯಾಜ್ಯ ಇತ್ಯರ್ಥಕ್ಕೆ ಸಹಕಾರಿಯಾಗಲಿದೆ. ಅಲ್ಲದೆ ಸ್ಥಳೀಯ ನ್ಯಾಯವಾದಿಗಳ ಜವಾಬ್ದಾರಿಯೂ ಹೆಚ್ಚಲಿದೆ. ನ್ಯಾಯವಾದಿಗಳು ಕಾನೂನು ಜ್ಞಾನ ವೃದ್ಧಿಸಿಕೊಂಡು ಗುಣಮಟ್ಟದ ಕಾರ್ಯ ನಿರ್ವಹಿಸಲು ಸಾಧ್ಯವಾಗಲಿದೆ. ವಕೀಲರು ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕೆಂದು ಹೇಳಿದರು.

    ಸಂಚಾರಿ ಪೀಠ ಉದ್ಘಾಟನೆಗೆ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ಡಾ.ಶಿವರಾಜ ಪಾಟೀಲರನ್ನು ಆಹ್ವಾನಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಅವರು ಬರಲು ಸಾಧ್ಯವಾಗಿಲ್ಲ. ಅವರ ನಿರ್ದೇಶನದಂತೆ ಸಂಚಾರಿ ಪೀಠ ಉದ್ಘಾಟನೆ ಮಾಡಿರುವುದು ಸಂತಸ ತಂದಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts