More

    ಪ್ರಕರಣಗಳ ಇತ್ಯರ್ಥಕ್ಕೆ 22 ನ್ಯಾಯಪೀಠ

    ಚಿಕ್ಕಮಗಳೂರು: ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಜಿಲ್ಲಾದ್ಯಂತ ಒಟ್ಟು 22 ನ್ಯಾಯಪೀಠಗಳನ್ನು ಗುರುತಿಸಲಾಗಿದೆ. ನಗರದಲ್ಲಿ 9 ಪೀಠಗಳ ಮೂಲಕ ವಿವಿಧ ಪ್ರಕರಣಗಳ ರಾಜಿ ಸಂಧಾನ, ತೀರ್ಪು ಪ್ರಕ್ರಿಯೆ ನಡೆಯುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಶುಭಾ ಗೌಡರ್ ತಿಳಿಸಿದರು.

    ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಸಭಾಂಗಣದಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಆನ್​ಲೈನ್ ಮೂಲಕ ಶನಿವಾರ ಆಯೋಜಿಸಿದ್ದ ಬೃಹತ್ ಇ-ಲೋಕ ಅದಾಲತ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ವ್ಯಾಜ್ಯಪೂರ್ವ ಹಾಗೂ ಕಾನೂನಿನ ಅಡಿಯಲ್ಲಿ ರಾಜಿಯಾಗುವ ಬಾಕಿ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಬೃಹತ್ ಇ-ಲೋಕ ಅದಾಲತ್ ಆಯೋಜಿಸಲಾಗಿದ್ದು ಪ್ರಕರಣಗಳನ್ನು ವಕೀಲರ ಮೂಲಕ, ಕಾನೂನು ಸೇವಾ ಪ್ರಾಧಿಕಾರಕ್ಕೆ ಕರೆ ಅಥವಾ ಇಮೇಲ್ ಮಾಡುವ ಮೂಲಕ ತಿಳಿಸಿದಲ್ಲಿ ವಿಡಿಯೋ ಸಂವಾದದಲ್ಲಿ ಪ್ರಕರಣಗಳನ್ನು ಸುಲಭವಾಗಿ ಬಗೆಹರಿಸಿಕೊಳ್ಳಬಹುದು ಎಂದರು.

    ದೇಶಾದ್ಯಂತ ಕರೊನಾ ಕಾರಣದಿಂದ ಬಹುತೇಕ ಪ್ರಕರಣಗಳು ಇತ್ಯರ್ಥವಾಗದೆ ಉಳಿದಿದ್ದು ಅವುಗಳನ್ನು ತ್ವರಿತಗತಿಯಲ್ಲಿ ಬಗೆಹರಿಸುವ ನಿಟ್ಟಿನಲ್ಲಿ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಬೃಹತ್ ಇ-ಲೋಕ ಅದಾಲತ್ ಆಯೋಜಿಸಲಾಗಿದೆ. ಕಕ್ಷಿದಾರರು ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಮ್ಮ ವಕೀಲರು ಅಥವಾ ಮನೆಯಲ್ಲೇ ಆಂಡ್ರಾಯ್್ಡ ಮೊಬೈಲ್ ಅಥವಾ ಲ್ಯಾಪ್​ಟಾಪ್ ಮೂಲಕ ಪ್ರಕರಣದ ಕುರಿತು ಸಂಧಾನಕಾರರ ಜತೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ವ್ಯಾಜ್ಯಗಳನ್ನು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳಬಹುದು. ಇದರಿಂದ ಕಕ್ಷಿದಾರರಿಗೆ ಸಮಯ ಹಾಗೂ ಹಣದ ಉಳಿತಾಯವಾಗಲಿದೆ. ಜತೆಗೆ ಪ್ರಕರಣಗಳೂ ಶೀಘ್ರ ಇತ್ಯರ್ಥಗೊಳ್ಳಲಿವೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts