

ನವದೆಹಲಿ: ಮಧ್ಯಪ್ರದೇಶ ಸರ್ಕಾರ ಪತನಕ್ಕೆ ಮುಖ್ಯ ಕಾರಣವಾದ ಜ್ಯೋತಿರಾದಿತ್ಯ ಸಿಂಧಿಯಾ ಈಗಾಗಲೇ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಾಗಿತ್ತು. ನಿನ್ನೆ ನವದೆಹಲಿಯಲ್ಲಿ ಗೃಹಸಚಿವ ಅಮಿತ್ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ ಕಾಂಗ್ರೆಸ್ಗೆ ರಾಜೀನಾಮೆಯನ್ನೂ ನೀಡಿದ್ದ ಅವರು ಇಂದು ಅಧಿಕೃತವಾಗಿ ಕಮಲ ಹಿಡಿದರು.
ಇಂದು ದೆಹಲಿ ಬಿಜೆಪಿ ಮುಖ್ಯಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ವೈಯಕ್ತಿಕ ವರ್ಚಸ್ಸಿನಿಂದಲೇ ದೇಶದಲ್ಲಿ ಗುರುತಿಸಿಕೊಂಡಿರುವ ಓರ್ವ ಯುವ ನಾಯಕ ನಮಗಿಂದು ಸಿಕ್ಕಿದ್ದಾರೆ ಎಂದು ಜೆ.ಪಿ.ನಡ್ಡಾ ಇದೇ ವೇಳೆ ಹೇಳಿದರು.
ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ಇನ್ನೂ 22 ಮಂದಿ ಕಾಂಗ್ರೆಸ್ ಶಾಸಕರು ಸ್ಪೀಕರ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಅವರು ಖುದ್ದಾಗಿ ಹೋಗಿ ರಾಜೀನಾಮೆ ಸಲ್ಲಿಸದ ಕಾರಣ ಇನ್ನೂ ಅಂಗೀಕಾರವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. (ಏಜೆನ್ಸೀಸ್)