More

    ಬಾಲಕನಿಗೆ ಕರೊನಾ ಸೋಂಕು

    ಬಾಲಕನಿಗೆ ಕರೊನಾ ಸೋಂಕು

    ಕಡೂರು/ಬೀರೂರು: ಕಡೂರು ತಾಲೂಕಿನ ಕೆ.ದಾಸರಹಳ್ಳಿ ಗ್ರಾಮದ 15 ವರ್ಷದ ಬಾಲಕನಿಗೆ (ಪಿ-6120) ಕರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಗ್ರಾಮವನ್ನು ಸೀಲ್​ಡೌನ್ ಮಾಡಲಾಗಿದೆ. ಬೀದಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ.

    ಬಾಲಕನಿಗೆ ಚಿಕ್ಕಮಗಳೂರು ಐಸೋಲೇಷನ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ. ಆತನ ಪ್ರಾಥಮಿಕ ಸಂಪರ್ಕದಲ್ಲಿದ್ದ 23 ಜನ ಹಾಗೂ ವಿವಿಧ ಆಸ್ಪತ್ರೆಗಳಿಗೆ ಆತ ತೆರಳಿದ್ದರಿಂದ ಅಲ್ಲಿ ಸಂಪರ್ಕಕ್ಕೆ ಬಂದಿರಬಹುದೆಂಬ ಶಂಕೆಯಿಂದ 32 ಜನ ಸೇರಿ ಒಟ್ಟು 55 ಜನರನ್ನು ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಇವರಲ್ಲಿ ವಿದ್ಯಾರ್ಥಿ ಕುಟುಂಬದವರೂ ಸೇರಿದ್ದಾರೆ.

    ಅನಾರೋಗ್ಯದ ಕಾರಣ ಕಡೂರು ಸಾರ್ವಜನಿಕ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಜೂ.6ರಂದು ತೆರಳಿದ್ದ. ತರೀಕೆರೆ ಮತ್ತು ಶಿವಮೊಗ್ಗಕ್ಕೆ ಸಂಬಂಧಿಕರ ಮನೆಗೆ ತೆರಳಿದ್ದ ಎಂದು ತಿಳಿದುಬಂದಿದೆ.

    ತಾಲೂಕಿನ ಮೊದಲ ಪ್ರಕರಣ ಇದಾಗಿದ್ದು, ಜನ ಆತಂಕಗೊಂಡಿದ್ದಾರೆ. ಲಾಕ್​ಡೌನ್ ಸಂದರ್ಭ ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿ ಮುಂಬೈ ಮೂಲದ ಮಹಿಳೆಯೊಬ್ಬರು ತನಗೆ ಕರೊನಾ ಇದೆ ಎಂದು ಹೇಳಿದ್ದರು. ಆಕೆಗೆ ಕರೊನಾ ನೆಗೆಟಿವ್ ಬಂದ ನಂತರ ಜನ ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದರು. ಲಾಕ್​ಡೌನ್ ತೆರವಾದ ಬಳಿಕ ಸೋಂಕು ಪ್ರಕರಣ ಪತ್ತೆಯಾಗಿರುವುದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರಿಗೆ ತಲೆನೋವು ಉಂಟಾಗಿದೆ. ಕಡೂರು, ಬೀರೂರು ಪೊಲೀಸ್ ಸಿಬ್ಬಂದಿ ಮತ್ತು ವೈದ್ಯಾಧಿಕಾರಿಗಳ ತಂಡ ಕೆ.ದಾಸರಹಳ್ಳಿ ಗ್ರಾಮದಲ್ಲಿದ್ದು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

    ಗ್ರಾಮವನ್ನು ಸೀಲ್​ಡೌನ್ ಮಾಡಿ, ಬೀದಿಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಜನರು ಆತಂಕಗೊಳ್ಳುವ ಅಗತ್ಯವಿಲ್ಲವೆಂದು ತಹಸೀಲ್ದಾರ್ ಜೆ.ಉಮೇಶ್ ಹೇಳಿದ್ದಾರೆ.

    ಕರೊನಾ ಸೋಂಕು ತಗುಲಿರುವ ಹತ್ತನೇ ತರಗತಿ ವಿದ್ಯಾರ್ಥಿ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗುವುದರೊಳಗೆ ಗುಣ ಹೊಂದಿದಲ್ಲಿ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು. ಹಾಗೆ ಆಗದಿದ್ದಲ್ಲಿ ಜುಲೈನಲ್ಲಿ ನಡೆಯುವ ಪೂರಕ ಪರೀಕ್ಷೆ ಸಂದರ್ಭ ಅವಕಾಶ ನೀಡಿ ಪ್ರಥಮ ಹಂತದ ಅಭ್ಯರ್ಥಿ ಎಂದೇ ಪರಿಗಣಿಸಲಾಗುವುದು ಎಂದು ಡಿಡಿಪಿಐ ಸಿ.ನಂಜಯ್ಯ ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts