ಶೇಖರ ಕಡ್ತಲಗೆ ಕೆ.ಎನ್.ಶೆಟ್ಟಿ ಪ್ರಶಸ್ತಿ ಪ್ರದಾನ

New Project (55)
Published on

ಗುರುಪುರ: ಯೋಗ ಕ್ಷೇತ್ರದಲ್ಲಿ 25 ವರ್ಷಗಳ ಸಾರ್ಥಕ ಸೇವೆಯನ್ನು ಪರಿಗಣಿಸಿ ಮಂಗಳಜ್ಯೋತಿ ಎಸ್.ಡಿ.ಎಂ. ಸಮಗ್ರ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶೇಖರ ಕಡ್ತಲ ಅವರಿಗೆ 8ನೇ ವರ್ಷದ ಕೆ.ಎನ್.ಶೆಟ್ಟಿ ಸಂಸ್ಮರಣಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೊಂಚಾಡಿ ದೇರೆಬೈಲಿನ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಕರ್ನಾಟಕ ಮಂಗಳೂರು ಮತ್ತು ಕೆ.ಎನ್.ಶೆಟ್ಟಿ ಸಂಸ್ಮರಣಾ ಸಮಿತಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.

ಯೋಗ ಪ್ರತಿಷ್ಠಾನದ ಅಧ್ಯಕ್ಷ ಏಕನಾಥ ಬಾಳಿಗ ಅಧ್ಯಕ್ಷತೆ ವಹಿಸಿದ್ದರು. ಯೋಗ ಗುರು ಕುಶಾಲಪ್ಪ ಗೌಡ, ಸನಾತನ ನಾಟ್ಯಾಲಯದ ಚಂದ್ರಶೇಖರ ಶೆಟ್ಟಿ, ಪ್ರತಿಷ್ಠಾನದ ಸಂಚಾಲಕಿ ಭಾರತಿ ಶೆಟ್ಟಿ ಮೊದಲಾದವರಿದ್ದರು. ಉಪಾಧ್ಯಕ್ಷ ಯೋಗೀಶ ಶೆಟ್ಟಿ ಪ್ರಸ್ತಾವಿಸಿದರು. ಕಾರ್ಯದರ್ಶಿ ಧನಂಜಯ ಕೆ. ಸ್ವಾಗತಿಸಿದರು. ಅಶೋಕ್ ನಿರೂಪಿಸಿದರು. ಪ್ರಭಾ ಸಿ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net