25.7 C
Bangalore
Sunday, December 15, 2019

ಮಹನೀಯರ ಭಾವಚಿತ್ರಗಳಿಗೆ ಅಪಮಾನ

Latest News

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕೆ.ಆರ್.ನಗರ: ತಾಲೂಕಿನ ಬೀರ‌್ನಹಳ್ಳಿ ಗ್ರಾಮದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್, ಗೌತಮ ಬುದ್ಧ ಭಾವಚಿತ್ರವಿರುವ ನಾಮಫಲಕಕ್ಕೆ ಕಿಡಿಗೇಡಿಗಳು ಸಗಣಿ ಬಳಿದು ಅಪಮಾನಿಸಿರುವುದನ್ನು ಖಂಡಿಸಿ ಅಂಬೇಡ್ಕರ್ ಯುವಕ ಸಂಘದ ನೇತೃತ್ವದಲ್ಲಿ ಸ್ಥಳೀಯರು ಸೋಮವಾರ ಪ್ರತಿಭಟನೆ ನಡೆಸಿದರು.

ಭಾನುವಾರ ರಾತ್ರಿ ಕಿಡಿಗೇಡಿಗಳು ನಾಮಫಲಕ ಮಾತ್ರವಲ್ಲದೆ ಅಂಬೇಡ್ಕರ್ ಫ್ಲೆಕ್ಸ್ ಕೂಡ ಹರಿದಿದ್ದಾರೆ. ಸೋಮವಾರ ಬೆಳಗ್ಗೆ ಈ ವಿಚಾರ ತಿಳಿದಿದ್ದು, ರೊಚ್ಚಿಗೆದ್ದ ಜನರು ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಧರಣಿ ಕುಳಿತರು.

ಅಲ್ಲದೆ ತಾಲೂಕಿನ ವಿವಿಧ ಭಾಗಗಳಿಂದ ಸ್ಥಳಕ್ಕಾಗಮಿಸಿದ ದಲಿತ ಮುಖಂಡರು ಪೊಲೀಸರು ಹಾಗೂ ಅಧಿಕಾರಿಗಳಿಗೆ ಈ ವಿಷಯ ತಿಳಿಸಿದರು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಸ್ಥಳಕ್ಕ ಎಬಂದ ಸಿಪಿಐ ಪಿ.ಕೆ.ರಾಜು ನೇತೃತ್ವದ ಸಿಬ್ಬಂದಿ ತಂಡ ಗ್ರಾಮದಲ್ಲಿ ಭದ್ರತೆ ಕೈಗೊಂಡು ಅಹಿತಕರ ಘಟನೆಗಳು ಜರುಗದಂತೆ ಎಚ್ಚರವಹಿಸಿತು.

ಗ್ರಾಮದಲ್ಲಿ ಪರಿಶಿಷ್ಟರು ಮತ್ತು ನಾಮಧಾರಿ ಸಮುದಾಯ ವಾಸವಾಗಿದ್ದು, ಪರಿಶಿಷ್ಟರ ಬೀದಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರನಲ್ಲಿ ಸ್ಥಾಪಿತವಾಗಿರುವ ಯುವಕ ಸಂಘದ ನಾಮಫಲಕವನ್ನು ಹಾಕಲಾಗಿದೆ. ಭಾನುವಾರ ರಾತ್ರಿ ನಾಮಧಾರಿ ಸಮುದಾಯದ ಬೀದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆ ಇತ್ತು. ಕೆಲ ಯುವಕರು ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸುತ್ತಿದ್ದರು. ಅವರಲ್ಲೇ ಕೆಲವರು ಈ ಕಿಡಿಗೇಡಿತನ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದರು.

ಸ್ಥಳಕ್ಕಾಗಮಿಸಿದ ಎಎಸ್‌ಪಿ ಶ್ರಮಾ ಮಿಶ್ರಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್, ಉಪ ತಹಸೀಲ್ದಾರ್ ಯಧು ಗಿರೀಶ್, ತಾಪಂ ವ್ಯವಸ್ಥಾಪಕಿ ಅನಿತಾ ಇನ್ನಿತರ ಅಧಿಕಾರಿಗಳ ತಂಡ ಮಾಹಿತಿ ಪಡೆದು ಪ್ರತಿಭಟನಾಕಾರರನ್ನು ಮನವೊಲಿಸಿದರು. ಈ ಕೃತ್ಯ ಎಸಗಿರುವವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಂಡು ನ್ಯಾಯಕೊಡಿಸುವ ಭರವಸೆ ನೀಡಿದರು.

ನಾಲ್ವರು ಯುವಕರ ವಿಚಾರಣೆ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಿ ಪರಶೀಲನೆ ನಡೆಸಿದ ಪೊಲೀಸರು, ಗ್ರಾಮದ ನಾಲ್ಕು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಎಚ್.ಬಿ.ದಿವಾಕರ್, ಮಾಜಿ ಸದಸ್ಯ ಹನಸೋಗೆ ನಾಗರಾಜ್, ದಸಂಸ ತಾಲೂಕು ಅಧ್ಯಕ್ಷ ಕಳ್ಳಿಮುದ್ದನಹಳ್ಳಿ ಚಂದ್ರು, ಅಖಿಲ ಕರ್ನಾಟಕ ಜೈಭೀಮ್ ಸಂಘದ ತಾಲೂಕು ಅಧ್ಯಕ್ಷ ಎಂ.ಸಿ.ಚಂದ್ರಶೇಖರ್ ಇತರರು ಇದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...