18 C
Bangalore
Friday, December 6, 2019

ನಾನು ಪದವಿ, ಹಣಕ್ಕಾಗಲಿ ರಾಜೀನಾಮೆ ನೀಡಲಿಲ್ಲ: ಎಚ್​ಡಿಕೆ ನನ್ನನ್ನು ನಿರ್ಲಕ್ಷಿಸಿದರು ಎಂದ ಅನರ್ಹ ಶಾಸಕ ನಾರಾಯಣಗೌಡ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಬೆಂಗಳೂರು: ನಾನು ಪದವಿಗಾಗಲಿ, ಹಣಕ್ಕಾಗಲಿ ರಾಜೀನಾಮೆ ನೀಡಲಿಲ್ಲ. ಕ್ಷೇತ್ರದಲ್ಲಿ ನಮಗೆ ತುಂಬಾ ನೋವಿತ್ತು. ಒಬ್ಬ ಶಾಸಕನಾಗಿ ಕೆಲಸ ಮಾಡುವುದಕ್ಕೆ ಬಿಡಲಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂದು ಅನರ್ಹಗೊಂಡ ಕೆ.ಆರ್.ಪೇಟೆಯ ಜೆಡಿಎಸ್​ ಶಾಸಕ ನಾರಾಯಣಗೌಡ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸದನದ ಪ್ರಾರಂಭಕ್ಕೂ ಮುನ್ನವೇ ನಾವು ರಾಜೀನಾಮೆ ನೀಡಿದೆವು. ಆದರೂ ಅನರ್ಹಗೊಳಿಸಿದ್ದಾರೆ. ಸ್ಪೀಕರ್ ರಮೇಶ್​ಕುಮಾರ್​ ಅವರ ತೀರ್ಮಾನ ತುಂಬಾ ನೋವು ತಂದಿದೆ. ಆದರೂ ನಮಗೆ ಸುಪ್ರೀಂಕೋರ್ಟ್​ ಮೇಲೆ ವಿಶ್ವಾಸವಿದ್ದು, ನಮ್ಮ ಪರವಾದ ತೀರ್ಪು ಬರುವ ನಂಬಿಕೆ ಇದೆ ಎಂದು ಹೇಳಿದರು.

ನಾವು ಯಾವ ಪಕ್ಷಕ್ಕೆ ಹೋಗಬೇಕೆಂಬ ಬಗ್ಗೆ ತೀರ್ಮಾನಿಸಿಲ್ಲ. ನಮ್ಮ ಕಾರ್ಯಕರ್ತರನ್ನು ಭೇಟಿ ಮಾಡಿದ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕ್ಷೇತ್ರದಲ್ಲಿರುವ ಕೆಲವರ ಮಾತು ಕೇಳಿ ಈ ರೀತಿ ಮಾಡಿದ್ದಾರೆ. ಗೌಡರ ಮನೆಯಲ್ಲೊಂದು ಸಿಂಡಿಕೇಟ್ ಇದೆ. ಆ ಸಿಂಡಿಕೇಟ್​ನ್ನು ದೇವೇಗೌಡರ ಕುಟುಂಬ ಬೆಳೆಸಿದೆ. ನಾನು ಒಬ್ಬ ಶಾಸಕ ಹೋದರೆ ಕನಿಷ್ಠ ಒಂದು ಟೀ ಕೂಡ ಕೊಡಲ್ಲ ಎಂದು ತಮ್ಮ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಕೆ.ಆರ್.ಪೇಟೆಯಲ್ಲಿ ಅವರು ಯಾರನ್ನು ಬೇಕಾದರೂ ನಿಲ್ಲಿಸಲಿ, ಅವರು ತುಂಬಾ ದೊಡ್ಡವರು. ಅಭ್ಯರ್ಥಿ ಹಾಕುವ ಬಗ್ಗೆ ನಾನು ಮಾತನಾಡಲ್ಲ. ನಾನೊಬ್ಬ ಒಕ್ಕಲಿಗ, ಮಹಾರಾಷ್ಟ್ರದಲ್ಲಿ ಉದ್ಯಮ ನಡೆಸುತ್ತೇನೆ. ಒಬ್ಬ ಒಕ್ಕಲಿಗನನ್ನೇ ಅವರು ಬೆಳೆಸಲಿಲ್ಲ. ಕಿಡಿಗೇಡಿಗಳ ಗುಂಪಿನ ಮಾತು ಕೇಳಿ ನೋವು ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಶಾಸಕನಾದ ನನ್ನನ್ನು ಎಚ್​.ಡಿ.ಕುಮಾರಸ್ವಾಮಿ ನಿರ್ಲಕ್ಷಿಸಿದರು. ನನ್ನ ಕ್ಷೇತ್ರಕ್ಕೆ ಅನುದಾನ ನೀಡದೆ ನನಗೆ ಅವಮಾನ ಮಾಡಿದ್ದಾರೆ. ನನ್ನ ವಿಚಾರವಾಗಿ ಚಾಡಿ ಮಾತನ್ನು ಕೇಳಿ ಈ ರೀತಿ ಮಾಡಿದ್ದಾರೆ. ಕ್ಷೇತ್ರದಲ್ಲಿ ಒಂದು ಗುಂಪಿನ ಮಾತನ್ನು ಕೇಳಿ ನನಗೆ ಅನ್ಯಾಯ ಮಾಡಿದರು. ಒಕ್ಕಲಿಗ ಸಮುದಾಯದ ಅಭಿವೃದ್ಧಿ ಮುಂಬೈನಲ್ಲಿ ಮಾಡುತ್ತಿದ್ದೆ. ಒಕ್ಕಲಿಗನನ್ನೆ ಅವರು ಗುರುತಿಸಲಿಲ್ಲ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...