17 C
Bangalore
Monday, December 9, 2019

ಜನರನ್ನು ಕಚೇರಿಗೆ ಅಲೆಸದಿರಿ

Latest News

ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಗೆ ಅಂತ್ಯ ಹಾಡುತ್ತಾ?

ಬೆಂಗಳೂರು: ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿದ್ದ ರಾಜಕೀಯ ಅಸ್ಥಿರತೆಯ ಗ್ರಹಣ ಸೋಮವಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆಗಳಂತೆಯೇ ಜನಾಭಿಪ್ರಾಯ ರೂಪುಗೊಂಡಿದ್ದರೆ, ಬಿಜೆಪಿ...

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ಕೆ.ಆರ್.ಪೇಟೆ: ತಾಲೂಕು ಕಚೇರಿಯಲ್ಲಿ ಯಾವುದೇ ಅಧಿಕಾರಿಗಳು ಸಾರ್ವಜನಿಕರನ್ನು ಅಲೆದಾಡಿಸದೆ ಸಕಾಲದಲ್ಲಿ ಕೆಲಸ ಮಾಡಿಕೊಡಬೇಕು ಎಂದು ಶಾಸಕ ನಾರಾಯಣಗೌಡ ಹೇಳಿದರು.

ಪಟ್ಟಣದ ಮಿನಿವಿಧಾನಸೌದಧ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಕಂದಾಯ ಅದಾಲತ್ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಾನು ಇಲ್ಲಿನ ಯಾವುದೇ ನೌಕರರನ್ನು ಮತ್ತು ಅಧಿಕಾರಿಗಳ ವಿರುದ್ಧ ಆರೋಪ ಮಾಡಲ್ಲ. ಕೆಳಮಟ್ಟದ ಗ್ರಾಮಲೆಕ್ಕಿಗರು, ಕಂದಾಯ ನಿರೀಕ್ಷಕರು ಸರಿಯಾದ ಕೆಲಸ ಮಾಡಿದರೆ, ಜನರು ಅಲೆದಾಡುವುದು ತಪ್ಪುತ್ತದೆ. ಪ್ರತಿ 10 ದಿನಕ್ಕೊಮ್ಮೆ ಹೊಬಳಿ ಮಟ್ಟದ ಕಂದಾಯ ಅದಾಲತ್ ಹಮ್ಮಿಕೊಂಡು ರೈತರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಬೇಕು ಎಂದರು.

ಒಳ್ಳೆಯ ಕೆಲಸವನ್ನು ಮಾಡುವ ನೌಕರರನ್ನು ಗೌರವಿಸುತ್ತೇನೆ. ಸತಾಯಿಸುವ ನೌಕರರು ಇದನ್ನ ಮನವಿ ಎಂದು ತಿಳಿದು ಒಳ್ಳೆಯ ಕೆಲಸ ಮಾಡಿ. ಇಲ್ಲದಿದ್ದರೆ ಶಿಸ್ತುಕ್ರಮಕ್ಕೆ ಮುಂದಾಗುತ್ತೇನೆ ಎಂದು ನೌಕರರಿಗೆ ಎಚ್ಚರಿಕೆ ನೀಡಿದರು.

ರೈತರು ತಮ್ಮ ಜಮೀನಿನ ದಾಖಲೆ ಸರಿಪಡಿಸಿಕೊಳ್ಳಲು ಅನೇಕ ವರ್ಷಗಳಿಂದ ಅಲೆದಾಡುತ್ತಿದ್ದಾರೆ. ಆರ್‌ಟಿಸಿ ತಿದ್ದುಪಡಿ, ಕಂಪ್ಯೂಟರ್ ಆರ್‌ಟಿಸಿ ಇಂಡೀಕರಣ, ಸಾಗುವಳಿ ಚೀಟಿಯಂತೆ ಖಾತೆಗೆ ಕೋರಿ ರೈತರು ಅಲೆದಾಡುತ್ತಿದ್ದಾರೆ. ಅವರಿಗೆ ಸರಿಯಾಗಿ ಕೆಲಸ ಮಾಡಿಕೊಡುತ್ತಿಲ್ಲ. ಅಂತಹ ಪ್ರಕರಣಗಳನ್ನು ತುರ್ತಾಗಿ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಮಿನಿವಿಧಾನಸೌಧ ಆವರಣದಲ್ಲಿ ಪಾರ್ಕ್ ಮಾಡಬೇಕು. ಅದಕ್ಕೆ ಪೂರಕವಾಗಿ ಅರಣ್ಯಾಧಿಕಾರಿಗಳು ಸಸಿ ನೆಡಬೇಕು. ಜನರು ಕೂರಲು ಆಸನಗಳನ್ನು ಹಾಕಬೇಕು. ಹಳೇ ತಾಲೂಕು ಕಚೇರಿ ಹಿಂಭಾಗದಲ್ಲಿರುವ ಸರ್ಕಾರಿ ಜಾಗದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಿ, ಅದರ ನಿರ್ವಹಣೆಗೆ ಗುತ್ತಿಗೆ ನೀಡಿ. ಅದರಿಂದ ಬಂದ ಹಣವನ್ನು ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳುವಂತೆ ಎಸಿ ಶೈಲಜಾಗೆ ಸೂಚಿಸಿದರು.

ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಪುರಸಭೆಯಿಂದ ನಿರ್ಮಾಣ ಮಾಡಬೇಕು. ಕೂಡಲೇ ಶೌಚಾಗೃಹದ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಸತೀಶ್‌ಗೆ ತಿಳಿಸಿದರು.

ನೂರಾರು ಅರ್ಜಿಗಳು: ಅಧಿಕಾರಿಗಳು ನಮ್ಮ ಕೆಲಸ ಮಾಡಿಕೊಡುತ್ತಿಲ್ಲ ಎಂದು ನೂರಾರು ರೈತರು ಶಾಸಕರಿಗೆ ಇದೇ ವೇಳೆ ಅರ್ಜಿ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರು, ನಿಮ್ಮ ಕೆಲಸಗಳನ್ನು ಹತ್ತು ದಿನಗಳಲ್ಲಿ ಅಧಿಕಾರಿಗಳಿಂದ ಮಾಡಿಸಿ, ನಿಮ್ಮ ಮನೆ ಬಾಗಲಿಗೆ ದಾಖಲೆ ತಲುಪಿಸುವುದಾಗಿ ಭರವಸೆ ನೀಡಿದರು.
ತಹಸೀಲ್ದಾರ್ ಶಿವಮೂರ್ತಿ, ಸಮಾಜ ಕಲ್ಯಾಣಾಧಿಕಾರಿ ಮನುಕುಮಾರ್, ಅರಣ್ಯಾಧಿಕಾರಿ ಮಧುಸೂದನ್, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಜಾನಕಿರಾಮ್, ಎಪಿಎಂಸಿ ಅಧ್ಯಕ್ಷ ನಾಗರಾಜು ಇದ್ದರು.

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...