ಕೆ.ಆರ್.ಸಾಗರ: ಕೆ.ಆರ್.ಸಾಗರ ಅಣೆಕಟ್ಟೆಯ ನೀರಿನ ಸಂಗ್ರಹ ಮಟ್ಟ ಶನಿವಾರ ಸಂಜೆಗೆ 90 ಅಡಿಗೆ ಇಳಿದಿದೆ.

ಗರಿಷ್ಠ ಮಟ್ಟ 124.80 ಅಡಿ ಇರುವ ಅಣೆಕಟ್ಟೆಯಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಭಾರಿ 10 ಅಡಿ ನೀರು ಹೆಚ್ಚು ಇದ್ದು, ಇರುವ ನೀರಿನಲ್ಲಿ ನದಿಪಾತ್ರದಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ನೀರು ಹರಿಸಲಾಗುತ್ತಿದೆ. ಈ ಭಾರಿ ಮುಂಗಾರು ಕೂಡ ಉತ್ತಮ ರೀತಿಯಲ್ಲಿ ಸುರಿಯುತ್ತಿದೆ. ಕಳೆದ ವರ್ಷ ಇದೇ ದಿನ ಅಣೆಕಟ್ಟೆಯಲ್ಲಿ 80.25 ಅಡಿ ನೀರಿನ ಸಂಗ್ರಹವಿತ್ತು. ಪ್ರಸ್ತುತ 15.930 ಟಿ.ಎಂ.ಸಿ ನೀರಿನ ಸಂಗ್ರಹ ವಿದೆ.