More

    ನಿಸಾರ್​ ಅಹಮದ್​ ನಿಧನದಿಂದ ಬಹುಮುಖ ಪ್ರತಿಭೆಯ ಸಾಹಿತ್ಯ ಪ್ರಭೆ ಮಸುಕಾದಂತಾಗಿದೆ

    ಬೆಂಗಳೂರು: ನಿತ್ಯೋತ್ಸವ ಕವಿ ಪ್ರೊ. ಕೆ.ಎಸ್. ನಿಸಾರ್​ ಅಹಮದ್​(84) ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

    ಟ್ವೀಟ್​ ಮೂಲಕ ನುಡಿ ನಮನ ಸಲ್ಲಿಸಿರುವ ಮಾಜಿ ಸಿಎಂ ಎಚ್​ಡಿಕೆ, ನಿತ್ಯೋತ್ಸವದ ಕವಿ ಪ್ರೊ. ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ, ಇವು ನಿಸಾರ್ ಅವರ ಪ್ರಸಿದ್ಧ ಕವನ ಸಂಕಲನಗಳಾಗಿವೆ. ನಿಸಾರ್‍ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ. ಇವರ ನಿಧನದಿಂದ ಬಹುಮುಖ ಪ್ರತಿಭೆಯ ಸಾಹಿತ್ಯ ಪ್ರಭೆ ಮಸುಕಾದಂತಾಗಿದೆ ಎಂದಿದ್ದಾರೆ.

    ಇದನ್ನೂ ಓದಿ: ಅಗಲಿದ ನಿತ್ಯೋತ್ಸವ ಕವಿಗೆ ಸ್ಯಾಂಡಲ್​ವುಡ್​ ನಮನ

    ‘ಜೋಗದ ಸಿರಿ ಬೆಳಕಿನಲ್ಲಿ’ ಹಾಡು ನನ್ನ ಕಿವಿಯಲ್ಲಿ ಈಗಲೂ ಅನುರಣಿಸುತ್ತಿದೆ. ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿದ್ದ ನಿಸಾರ್ ಅಹಮದ್ ಅವರ ಸಾಹಿತ್ಯ ಸೇವೆ ಅನನ್ಯ. ನಾಡು ಕಂಡ ಹೆಮ್ಮೆಯ ಸಾಹಿತಿ. 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ನಿಸಾರ್ ಅವರ ಕುಟುಂಬದ ಸದಸ್ಯರು ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆಂದರು.

    ಇದನ್ನೂ ಓದಿ: ನಿತ್ಯೋತ್ಸವ ಕವಿ ನಿಸಾರ್​ ಅಹಮದ್​ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿತು: ಸಿಎಂ ಯಡಿಯೂರಪ್ಪ

    ಕನ್ನಡದ ನಿತ್ಯೋತ್ಸವ ಕವಿ ಡಾ.ಕೆ.ಎಸ್​. ನಿಸಾರ್​ ಅಹಮ್ಮದ್​ ಇನ್ನಿಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts