ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.
ಇದನ್ನೂ ಓದಿ: ರೆಬೆಲ್ಸ್ಟಾರ್ ಅಂಬರೀಶ್ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭಾಶಯ ಕೋರಿದ ದರ್ಶನ್
ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು ನಡೆದ ಪರೀಕ್ಷೆಯಲ್ಲಿ ಒಟ್ಟು 6,675 ಮಂದಿ ಅರ್ಹತೆ ಪಡೆದಿದ್ದಾರೆ. ಅಷ್ಟೂ ಮಂದಿಯ ನೋಂದಣಿ ಸಂಖ್ಯೆಗಳನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಭ್ಯರ್ಥಿಗಳ ಅರ್ಹತೆಯನ್ನು ನಿರ್ಧರಿಸಲು ಈ ಪರೀಕ್ಷೆ ಪ್ರಮುಖವಾಗಿದ್ದು, ಇದರ ಜವಾಬ್ದಾರಿಯನ್ನು ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಕೆಇಎಗೆ ವಹಿಸಿತ್ತು. ಅದನ್ನು ಯಶಸ್ವಿಯಾಗಿ ಮುಗಿಸಿದ್ದು, ವೆಬ್‍ಸೈಟ್‍ನಲ್ಲಿ ವಿಷಯವಾರು, ವರ್ಗಾವಾರು ಅರ್ಹರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಕಳೆದ ಜ.13ರಂದು ಪರೀಕ್ಷೆ ನಡೆದಿತ್ತು. 95,201 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಅರ್ಹತೆ ಪಡೆದವರಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು, 97 ಲಿಂಗತ್ವ ಅಲ್ಪಸಂಖ್ಯಾತರು ಇದ್ದಾರೆ. 350 ಮಂದಿ ಅಂಗವಿಕಲರು ಈ ಪಟ್ಟಿಯಲ್ಲಿ ಸೇರಿದ್ದಾರೆ.
ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ದಾಖಲೆಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳಿಗೆ ಇ- ಪ್ರಮಾಣ ಪತ್ರಗಳನ್ನು ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
ಪ್ರಚಾರ ಮುಗಿಯುತ್ತಿದ್ದಂತೆ ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಪ್ರಧಾನಿ ಮೋದಿ