More

    ಕೆ-ಸೆಟ್ ತಾತ್ಕಾಲಿಕ ಪಟ್ಟಿ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

    ಬೆಂಗಳೂರು ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ- 2023 (ಕೆ-ಸೆಟ್) ರಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

    ಪತ್ರಿಕೆ-1 ಮತ್ತು ಪತ್ರಿಕೆ-2ರ ಎಲ್ಲ 41 ವಿಷಯಗಳ ವಿಷಯವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಮೇ 10ರೊಳಗೆ ಇ-ಮೇಲ್ keakset2023gmail.com ಮಾಡಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

    ಜನವರಿ 13ರಂದು ಪ್ರಾಧಿಕಾರ ಪರೀಕ್ಷೆ ನಡೆಸಿ, ಏ.4ರಂದು ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿತ್ತು. ಈ ತಾತ್ಕಾಲಿಕ ಅಂಕಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಯು ಕೆಸೆಟ್ನಲ್ಲಿ ಅರ್ಹತೆ ಪಡೆದಿದ್ದಾರೆಂದು ಭಾವಿಸುವಂತಿಲ್ಲ. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts