More

    ಬೆಂಗಳೂರು ನಗರ ನೂತನ ಜಿಲ್ಲಾಧಿಕಾರಿಯಾಗಿ ಕೆ.ಶ್ರೀನಿವಾಸ್; ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ಭ್ರಷ್ಟಾಚಾರ ಆರೋಪ ಮತ್ತು ಎಸಿಬಿ ದಾಳಿಯಿಂದಾಗಿ ರಾಜ್ಯದ ಗಮನ ಸೆಳೆದಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಸ್ಥಾನಕ್ಕೆ ಈಗ ಹೊಸದಾಗಿ ಕೆ.ಶ್ರೀನಿವಾಸ್ ನೇಮಕಗೊಂಡಿದ್ದು, ರಾಜ್ಯ ಸರ್ಕಾರ ಒಟ್ಟು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ಸ್ಥಳ ನಿರೀಕ್ಷೆಯಲ್ಲಿದ್ದ ಇನ್ನಿಬ್ಬರಿಗೆ ಸ್ಥಳ ನಿಯುಕ್ತಿಗೊಳಿಸಿದೆ.

    ನಿವೇಶನ ವಿಚಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದ ಬೆಂಗಳೂರು ನಗರದ ಈ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರ ವರ್ಗಾವಣೆ ಬಳಿಕ ಐಎಎಸ್ ಅಧಿಕಾರಿ ಸಂಗಪ್ಪ ಪ್ರಭಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ನಂತರ ಜೆ. ಮಂಜುನಾಥ್ ಅವರ ಅಮಾನತು, ಬಳಿಕ ಬಂಧನವೂ ನಡೆದಿದ್ದು, ಇದೀಗ ಬೆಂಗಳೂರು ನಗರದ ನೂತನ ಜಿಲ್ಲಾಧಿಕಾರಿಯಾಗಿ ಕೆ. ಶ್ರೀನಿವಾಸ್ ನೇಮಕಗೊಂಡಿದ್ದಾರೆ.

    ಇದನ್ನೂ ಓದಿ: ಭ್ರಷ್ಟಾಚಾರ ಆರೋಪಕ್ಕೀಡಾಗಿರುವ ಜಿಲ್ಲಾಧಿಕಾರಿ ಮಂಜುನಾಥ್ ಎತ್ತಂಗಡಿ

    ಸ್ಥಳ ನಿರೀಕ್ಷೆಯಲ್ಲಿದ್ದ ಕೆ. ಶ್ರೀನಿವಾಸ್ ಇದಕ್ಕೂ ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅದಕ್ಕೂ ಮೊದಲು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಬಿ.ಎಂ. ವಿಜಯಶಂಕರ್ ಬಂಧನವಾಗಿದ್ದಾಗಲೂ ಕೆ.ಶ್ರೀನಿವಾಸ್ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಇದೀಗ ಈ ನೇಮಕದ ಮೂಲಕ ಇವರು ಎರಡನೇ ಸಲ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದಂತಾಗಿದೆ.

    ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ

    ಕೆ. ಶ್ರೀನಿವಾಸ್ ಸೇರಿದಂತೆ ರಾಜ್ಯ ಸರ್ಕಾರ ಇಂದು ಒಟ್ಟು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ವಾರದ ಹಿಂದಷ್ಟೇ ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದ ಎಂ. ಸುಂದರೇಶ್​ ಬಾಬು ಕೊಪ್ಪಳಕ್ಕೆ ಎತ್ತಂಗಡಿಯಾಗಿದ್ದಾರೆ.

    ವರ್ಗಾವಣೆಯಾದ ಇತರರು: ತುಳಸಿ ಮದ್ದಿನೇನಿ- ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ; ಪಿ.ರಾಜೇಂದ್ರ ಚೋಳನ್​- ವ್ಯವಸ್ಥಾಪಕ ನಿರ್ದೇಶಕ, ಬೆಂಗಳೂರು ಸ್ಮಾರ್ಟ್​ ಸಿಟಿ; ಎನ್​.ಎಂ.ನಾಗರಾಜ್​- ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ; ರಾಹುಲ್​ ರತ್ನಂ ಪಾಂಡೆ- ಪ್ರಧಾನ ವ್ಯವಸ್ಥಾಪಕ, ಯುಕೆಪಿ ಪುನರ್​ವ್ಯವಸ್ಥೆ, ಪುನರ್ವಸತಿ ಮತ್ತು ಭೂಸ್ವಾಧಿನ ಯೋಜನೆ. ಸ್ಥಳ ನಿರೀಕ್ಷೆಯಲ್ಲಿದ್ದ ಮಹಾಂತೇಶ ಬೀಳಗಿ ಅವರನ್ನು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

    ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts