ತತ್ವಾಧಾರಿತ ರಾಜಕಾರಣ ಮಾಡಿದ ಕೆವಿಎಸ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಬಣ್ಣನೆ

K.V. Shankara Gowda Memorial Drama Festival concludes Mandya

ಮಂಡ್ಯ: ಮಹಾತ್ಮ ಗಾಂಧೀಜಿ ಅವರಿಂದ ಪ್ರಭಾವಿತರಾದ ನಿತ್ಯ ಸಚಿವ ಕೆ.ವಿ.ಶಂಕರಗೌಡ ಅವರು ಹಠವಾದಿಯಾಗಿದ್ದರು. ತತ್ವಾಧಾರಿತ ರಾಜಕಾರಣ ಮಾಡಿ ಇಂದಿಗೂ ಪ್ರಸ್ತುತವಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಬಣ್ಣಿಸಿದರು.
ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ರಂಗಮಂದಿರದಲ್ಲಿ ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಕೆ.ವಿ.ಶಂಕರಗೌಡ ನೆನಪಿನ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಮಂಡ್ಯ ವಿಶಿಷ್ಟ ಜಿಲ್ಲೆ. ಭಗೀರಥರ ಜಿಲ್ಲೆಯಾಗಿದೆ ಎಂದರೆ ಉತ್ಪ್ರೇಕ್ಷೆಯಾಗದು. ಕೆ.ವಿ.ಶಂಕರಗೌಡ ಅವರ ಪ್ರಭಾವದಿಂದ ಪ್ರೊ.ಜಯಪ್ರಕಾಶಗೌಡ ಅವರು ಪ್ರಭಾವಿತರಾಗಿ ಹಲವು ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.
ಕೆವಿಎಸ್ ಅವರು ನಾಟಕ ಅಕಾಡೆಮಿ, ಲಲಿತಾ ಅಕಾಡೆಮಿ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದರೂ ಸ್ವತಃ ಏಳು ನಾಟಕಗಳನ್ನು ಬರೆದವರು. ಪಾದುಕ ಕಿರೀಟ ಎಂಬ ನಾಟಕ ಪ್ರಮುಖ. ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ, ಅವರನ್ನು ವೇದಿಕೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರೆ ಅವರು ಅಲ್ಲಿ ನಾಟಕ ಕ್ಷೇತ್ರದ ವಿಷಯಗಳನ್ನು ಮಾತನಾಡುತ್ತಿದ್ದರೆ ಹೊರತು ಮತ ಕೇಳುತ್ತಿರಲಿಲ್ಲ ಎಂದು ಸ್ಮರಿಸಿದರು.
ವಕೀಲ ವೃತ್ತಿ ಆರಂಭಿಸಿ ತಮ್ಮ ಜೀವನ ಅಥವಾ ಕುಟುಂಬಕ್ಕೆ ಮೀಸಲಾಗಿರಬಹುದಿತ್ತು. ಆದರೆ ಕೆವಿಎಸ್ ಅವರು ವಕೀಲ ಗಿರಿಯಲ್ಲಿ ನಾಟಕ ಇರಬಾರದು ಎಂಬುದನ್ನು ಕಂಡುಕೊಂಡಿದ್ದರು. ಹಾಗಾಗಿ ನಾಟಕ, ಕಲೆ, ರಾಜಕಾರಣ ಕ್ಷೇತ್ರದಲ್ಲಿ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತಂದರು. ಇಷ್ಟೆಲ್ಲ ಸಾಧನೆಗಾಗಿ ಎಲ್ಲವನ್ನೂ ತ್ಯಜಿಸಿದ್ದರು ಎಂದರೆ ತಪ್ಪಾಗಲಾರದು ಎಂದು ತಿಳಿಸಿದರು.
ಕರ್ನಾಟಕ ನಾಟಕ ಅಕಾಡೆಮಿ ರಿಜಿಸ್ಟ್ರಾರ್ ನಿರ್ಮಲಾ ಮಠಪತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ, ಲೋಕೇಶ್ ಚಂದಗಾಲು ಇತರರಿದ್ದರು.
ಕಾಳೇನಹಳ್ಳಿ ಹಿರಿಯ ರಂಗಭೂಮಿ ಕಲಾವಿದ ಟಿ.ಕೆಂಚೇಗೌಡ ಅವರಿಗೆ ಬೆಳ್ಳಿ ಕಡಗ ನೀಡಿ ಸನ್ಮಾನಿಸಲಾಯಿತು. ನಂತರ ಮಾಂಡವ್ಯ ಕಲಾ ಟ್ರಸ್ಟ್‌ನಿಂದ ಗದಾಯುದ್ಧ ಪೌರಾಣಿಕ ನಾಟಕ ಪ್ರಸ್ತುತ ಪಡಿಸಲಾಯಿತು.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…