ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನಗಳು ನಿಷ್ಫಲವಾಗುತ್ತವೆ: ಕೆ ಸಿ ವೇಣುಗೋಪಾಲ್‌

ಮಂಗಳೂರು: ಬಿಜೆಪಿಯವರು ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ನಾಶಕ್ಕೆ ಪ್ರಯತ್ನಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರ ಬಗ್ಗೆ ಸಂಪೂರ್ಣ ವಿಶ್ವಾಸವಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಕಾಂಗ್ರೆಸ್ ಶಾಸಕರಿಗೆ ನೋಟಿಸ್ ನೀಡಲಾಗಿದೆ. ಶಾಸಕರು ನೋಟಿಸ್​​ಗೆ ಉತ್ತರ ನೀಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರ ಅಸ್ಥಿರತೆಗೊಳಿಸುವ ಯಾವುದೇ ಪ್ರಯತ್ನಗಳು ಫಲ ನೀಡುವುದಿಲ್ಲ. ಮೋದಿ, ಅಮಿತ್ ಷಾ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ನಾಶಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮಾತನಾಡಿ, ಲೋಕಸಭೆ ಚುನಾವಣೆ ಸೀಟು ಹಂಚಿಕೆ ಬಗ್ಗೆ ಚರ್ಚಿಸಿಲ್ಲ. ಸೀಟು ಹಂಚಿಕೆ ಬಗ್ಗೆ ಹೈಕಮಾಂಡ್ ತೀರ್ಮಾನವೇ ಅಂತಿಮ. ಕಾಂಗ್ರೆಸ್ ಕ್ಷೇತ್ರವನ್ನು ಜೆಡಿಎಸ್​ನವರು ಕೇಳಬಹುದು. ಜೆಡಿಎಸ್ ಕ್ಷೇತ್ರವನ್ನು ಕಾಂಗ್ರೆಸ್ ಕೂಡ ಕೇಳಬಹುದು. ಎಲ್ಲರಿಗೂ ಸಮಾನ ಅವಕಾಶ ನೀಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯವರು 30 ಕೋಟಿ ರೂ. ಆಫರ್ ಕೊಟ್ಟಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಹಣ ಇದೆ ತೆಗೆದುಕೊಳ್ಳಿ ಎಂದಿದ್ದಾರೆ. ಬಿಜೆಪಿಯವರಿಗೆ ಹಣ ಎಲ್ಲಿಂದ ಬರುತ್ತದೆ? 7 ಸ್ಟಾರ್ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡುತ್ತಾರೆ. ಬಿಜೆಪಿಯದ್ದು ಪ್ರಜಾಪ್ರಭುತ್ವ ವಿರೋಧಿ ನೀತಿ. ಬಿಜಪಿಯವರಂತಹ ಮೋಸಗಾರರು, ಭ್ರಷ್ಟರು ಯಾರೂ ಇಲ್ಲ ಎಂದು ಕಿಡಿಕಾರಿದರು. (ದಿಗ್ವಿಜಯ ನ್ಯೂಸ್)

One Reply to “ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನಗಳು ನಿಷ್ಫಲವಾಗುತ್ತವೆ: ಕೆ ಸಿ ವೇಣುಗೋಪಾಲ್‌”

  1. Venu gopal ais a womaniser and do not trust him. Where is and who is loooting India we are aware of this so be mind in your business and where is the national Herald 2G Coal scam Augusta westland Bofors. By the way your Ex Chief Ministers are getting car as a gift earlier he got watch from where resources your MLA are getting money. Venugopal shut your mouth and go back to Kerala where you are living like a Slave

Comments are closed.