ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ

mng-12oct-maarigudi
Published on



ಮಂಗಳೂರು : ಹೆತ್ತು ಹೊತ್ತ ತಾಯಿಗೆ ಸನಾತನ ಸಂಸ್ಕೃತಿ ಬಹಳಷ್ಟು ಗೌರವ ನೀಡಿದೆ. ಆದೇ ರೀತಿ ಇಡೀ ಲೋಕದ ತಾಯಿಯಾದ ಕಾಪುವಿನ ಮಾರಿಯಮ್ಮ ನಮ್ಮ ಸಂಕಷ್ಟಗಳನ್ನು ಕಳೆಯುತ್ತಾಳೆ ಎಂಬ ನಂಬಿಕೆ ನಮ್ಮಲ್ಲಿದೆ. ಕ್ಷೇತ್ರದ ಜೀರ್ಣೋದ್ಧಾರ ಸಂದರ್ಭ ಲೇಖನ
ಯಜ್ಞ ಹಮ್ಮಿಕೊಳ್ಳಲಾಗಿದೆ ಎಂದು ಕಾಪು ಮಾರಿಗುಡಿ ಕ್ಷೇತ್ರದ ಕುಮಾರ ತಂತ್ರಿ ಹೇಳಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ನವದುರ್ಗ ಲೇಖನ ಯಜ್ಞ ಸಮಿತಿ ವತಿಯಿಂದ ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮತ್ತು ತಾಲೂಕು ಸಮಿತಿಗಳ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು ‘ ಸಾವಿರಾರು ವರ್ಷಗಳ ಹಿಂದೆ ಕಾಪುವಿನ ಮಾರಿಯಮ್ಮ ಪ್ರತಿಷ್ಠಾಪನೆಗೊಂಡಿದ್ದು ಕ್ಷೇತ್ರದ ಅಭಿವೃದ್ಧಿ ಕಾರ್ಯ ಭರದಿಂದ ನಡೆಯುತ್ತಿದೆ ಎಂದರು.
ಕಮಲ ಪ್ರಭಾಕರ ಭಟ್, ಅಶ್ವಿನಿ ಮುಹಿಲನ್, ಸುನಂದಾ ಪುರಾಣಿಕ್, ಮಮತಾ ಸುನಿಲ್ ಆಚಾರ್, ವೃಂದ ವೇದವ್ಯಾಸ ಕಾಮತ್, ನಿರ್ಮಿತ ಸತೀಶ್ ಪಟ್ಲ, ಶ್ರೀದುರ್ಗ ಹರೀಶ್ ಪೂಂಜಾ, ಮಮತಾ ಗಟ್ಟಿ, ಮಲ್ಲಿಕಾ ಪ್ರಸಾದ್ ಶೆಟ್ಟಿ ದೀಪ ಪ್ರಜ್ವಲನೆಗೈದರು.
ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಕಾಪು ಮಾತನಾಡಿ ‘ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ 2025ರ ಫೆ.25ರಿಂದ ಮಾ.5ರ ತನಕ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ನವ ದುರ್ಗ ಲೇಖನ ಯಜ್ಞ ಮತ್ತು ನವ
ಚಂಡಿಕಾ ಯಾಗ ನಡೆಸಲು ದೇವಿಯ ಅಭಯವಾಗಿದೆ. 99,999 ಭಕ್ತರು ಈ ನವದುರ್ಗ ಲೇಖನ ಯಜ್ಞದಲ್ಲಿ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ.
ಡಾ.ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ ‘ತಾಯಿ ಎಂದರೆ ಪ್ರಕೃತಿ, ನಾವು ಪ್ರಕೃತಿಯ ಆರಾಧಕರು. .ಲೇಖನ ಯಜ್ಞವನ್ನು ನಾವೆಲ್ಲರೂ ಮಾಡಬೇಕು. ದೇವರನ್ನು ಮತ್ತು ದೇಶವನ್ನು ಆರಾಧನೆ ಮಾಡೋಣ ಎಂದರು.
ನವದುರ್ಗ ಲೇಖನ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ, ಅಧ್ಯಕ್ಷ ಮಾಜಿ ಶಾಸಕ ರಘುಪತಿ ಭಟ್, ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ವಿಶ್ವನಾಥ, ಪ್ರಮುಖರಾದ ಸಂದೀಪ್ ಕುಮಾರ್ , ಎಂ.ಬಿ.ಪುರಾಣಿಕ್, ರಘುನಾಥಶೆಟ್ಟಿ ಕೊಪ್ಪಲಂಗಡಿ, ಸುವರ್ತನ್‌ಉಡುಪಿ, ಸಂತೋಷ್ ಕುಮಾರ್ ರೈ ಬೋಳಿಯಾರ್, ಪಟ್ಲ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಚಂದ್ರಹಾಸ ಶೆಟ್ಟಿ ಸ್ವಾಗತಿಸಿ, ಕೃಷ್ಣ ಶೆಟ್ಟಿ ತಾರೆಮಾರ್ ವಂದಿಸಿದರು. ಪುರುಷೋತ್ತಮ ಭಂಡಾರಿ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net