More

    ಬಾಕ್ಸ್​ಆಫೀಸ್​ನಲ್ಲಿ ಮುಂದುವರೆದ ಕಾಟೇರನ ಅಬ್ಬರ; ಎರಡನೇ ವಾರಕ್ಕೆ ಗಳಿಸಿದ್ದೆಷ್ಟು

    ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ನಟನೆಯ, ತರುಣ್​ ಸುಧೀರ್​ ನಿರ್ದೇಶನದ ಬಹು ನಿರೀಕ್ಷಿತ ಕಾಟೇರ ಚಿತ್ರವು ಡಿಸೆಂಬರ್​ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಹಾಗೂ ಸೆಲೆಬ್ರಿಟಿಗಳಿಂದ ಉತ್ತಮ ಪ್ರತಿಕ್ರಿಯೆಗಳನ್ನು ಪಡದುಕೊಳ್ಳುವಲ್ಲಿ ಚಿತ್ರ ಮುಂಚೂಣಿಯಲ್ಲಿದೆ.

    2023ರ ವರ್ಷಾಂತ್ಯದಲ್ಲಿ ಬಿಡುಗಡೆಯಾದ ಚಿತ್ರವು ಈವರೆಗೂ 104.58 ಕೋಟಿ ರೂಪಾಯಿ ಕಮಾಯಿ ಮಾಡಿದೆ ಎಂದು ತಿಳಿದು ಬಂದಿದೆ. ವಾರದ ದಿನಗಳಲ್ಲೂ ಚಿತ್ರ ಉತ್ತಮ ಗಳಿಕೆ ಕಂಡಿದ್ದು, ಬಿಡುಗಡೆಯಾದ ಒಂದೇ ವಾರದಲ್ಲಿ ಚಿತ್ರ 100 ಕೋಟಿ ರೂಪಾಯಿ ಗಳಿಕೆ ಮಾಡಿ ವಿಶೇಷ ದಾಖಲೆಗೆ ಪಾತ್ರವಾಗಿತ್ತು.

    ಬಾಕ್ಸ್​ಆಫೀಸ್​ನಲ್ಲಿ ಮುಂದುವರೆದ ಕಾಟೇರನ ಅಬ್ಬರ; ಎರಡನೇ ವಾರಕ್ಕೆ ಗಳಿಸಿದ್ದೆಷ್ಟು

    ಇದನ್ನೂ ಓದಿ: 19 ರನ್​ ನೀಡಿ 7 ವಿಕೆಟ್​ ಪಡೆದ ಆರ್​ಸಿಬಿ ಮಾಜಿ​ ಆಟಗಾರ; ಎಸ್​ಆರ್​ಎಚ್​ಗೆ ಹೆಚ್ಚಿದ ತೋಳ್ಬಲ

    ಚಿತ್ರತಂಡದವರು ಹೇಳಿರುವ ಪ್ರಕಾರ ಸಿನಿಮಾ ಎರಡನೇ ವಾರಕ್ಕೆ 157.42 ಕೋಟಿ ಕಮಾಯಿ ಮಾಡಿದೆ ಎಂದು ತಿಳಿದು ಬಂದಿದೆ. ಮೊದಲ ವಾರದಲ್ಲಿ 406 ಚಿತ್ರಮಂದಿರಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ  ಬಿಡುಗಡೆ ಯಾಗಿತ್ತು. 2 ನೇ ವಾರದಲ್ಲಿ462 ಥೇಟರ್ ಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ತನ್ನ ಯಶಸ್ವಿ ಪ್ರದರ್ಶನ  ಮುಂದುವರೆಸಿತ್ತು. ಇದೀಗ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಒಟ್ಟು 416 ಥೇಟರ್ ಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ತನ್ನ ಯಶಸ್ವಿ ಪ್ರದರ್ಶನ  ಮುಂದುವರೆಸಿದೆ.

    ಈ ಚಿತ್ರದ ಮೂಲಕ ಕನಸಿನ ರಾಣಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್​ ಸ್ಯಾಂಡಲ್​ವುಡ್​ಗೆ ಪಾದರ್ಪಣೆ ಮಾಡುತ್ತಿದ್ದು, ಚಿತ್ರದಲ್ಲಿ ಹಿರಿಯ ನಟರಾದ ಬಿರಾದಾರ್, ಜಗಪತಿ ಬಾಬು, ಕುಮಾರ್​ ಗೋವಿಂದ್, ಮಾಸ್ಟರ್ ರೋಹಿತ್ ಮತ್ತು ಡ್ಯಾನಿಶ್ ಅಖ್ತರ್ ಸೈಫಿ ನಟಿಸಿದ್ದಾರೆ. ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ, ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts