ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಗ್ರಾಮೀಣ ಕ್ರೀಡೆಯಾಗಿದ್ದ ಕಬಡ್ಡಿ ದೈಹಿಕ, ವಾನಸಿಕ ಕ್ಷಮತೆ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿದೆ. ಪ್ರಸ್ತುತ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಸಾಮರ್ಥ್ಯ ತೋರಿಸುವ ಮೂಲಕ ಈ ಕ್ರೀಡೆಗೆ ಭವಿಷ್ಯ ಇರುವುದು ಸಾಬೀತಾಗಿದೆ ಎಂದು ಉದ್ಯಮಿ ಚಂದ್ರಹಾಸ ಶೆಟ್ಟಿ ದೇರಳಕಟ್ಟೆ ಹೇಳಿದರು.
ಉಳ್ಳಾಲ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಆಶ್ರಯದಲ್ಲಿ ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಹಯೋಗದಲ್ಲಿ ಉಳ್ಳಾಲದ ಮಹಾತ್ಮ ಗಾಂಧಿ ಮೈದಾನದಲ್ಲಿ ಭಾನುವಾರ ಉಳ್ಳಾಲ ತಾಲೂಕುಮಟ್ಟದ ಹೊನಲು ಬೆಳಕಿನ ವ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ಉಳ್ಳಾಲ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಅಧ್ಯಕ್ಷತೆ ವಹಿಸಿದ್ದರು. ದೇರಳಕಟ್ಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಅಡ್ಯಂತಾಯ, ಅಮೆಚೂರು ಕಬಡ್ಡಿ ಅಸೋಸಿಯೇಷನ್ ಜಿಲ್ಲಾ ಗೌರವ ಸಲಹೆಗಾರ ರತನ್ ಕುವಾರ್ ಶೆಟ್ಟಿ, ವಾಡೂರು ಸಿರ್ಡಿ ಸಾಯಿ ಮಂದಿರದ ಸ್ಥಾಪಕ ಸುರೇಶ್ ಕೆ.ಪಿ., ಉದ್ಯಮಿ ಹರೀಶ್ ಕಾಮತ್, ತೊಕ್ಕೊಟ್ಟು ಶಿವಾಜಿ ಫ್ರೆಂಡ್ ಸರ್ಕಲ್ ಅಧ್ಯಕ್ಷ ವಾಧವ ಗಟ್ಟಿ, ಉಳ್ಳಾಲ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಕೋಶಾಧಿಕಾರಿ ರುರಾಮ ಶೆಟ್ಟಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಜಿದ್ ಉಳ್ಳಾಲ್ ಮೊದಲಾದವರಿದ್ದರು.
ಅಮೆಚೂರು ಕಬಡ್ಡಿ ಅಸೋಸಿಯೇಷನ್ ಜಿಲ್ಲಾ ಉಪಾಧ್ಯಕ್ಷ ಕೆ.ಟಿ.ಸುವರ್ಣ ಪ್ರಸ್ತಾವನೆಗೈದರು. ಪ್ರವೀಣ್ ಎಸ್.ಕುಂಪಲ ನಿರೂಪಿಸಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಸಿರಿಲ್ ರಾಬರ್ಟ್ ಡಿಸೋಜ ವಂದಿಸಿದರು.