

ಹೆಬ್ರಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಶನಿವಾರ ರಾಜ್ಯಮಟ್ಟದ ಕಬಡ್ಡಿ ಆಟಗಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೆಬ್ರಿ ತಾಲೂಕಿನ ಮುಟ್ಲುಪಾಡಿಯ ನಡುಮನೆ ಪ್ರೀತಮ್ ಶೆಟ್ಟಿ (26) ಮೃತರು. ಅವರು ನಾಗಮಂಗಲದಲ್ಲಿ ಕಬ್ಬಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದಾಗಲೇ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಪ್ರೀತಂ ಶೆಟ್ಟಿ ಯುನಿವರ್ಸಿಟಿ ಹಾಗೂ ರಾಜ್ಯಮಟ್ಟದ ಕಬಡ್ಡಿ ಆಟಗಾರನಾಗಿದ್ದರು. ಅತ್ಯುತ್ತಮ ಕಬಡ್ಡಿ ಕ್ರೀಡೆ ಸಂಘಟಕರೂ ಆಗಿದ್ದರು. ಜನವರಿಯಲ್ಲಿ ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳಲಿದ್ದರು.