More

    ಕಬ್ಬಿನಾಲೆ ಕೆಳಮಠ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

    ವಿಜಯವಾಣಿ ಸುದ್ದಿಜಾಲ ಹೆಬ್ರಿ
    ಹೆಬ್ರಿ ಸಮೀಪದ ಇತಿಹಾಸ ಪ್ರಸಿದ್ಧ ಕಬ್ಬಿನಾಲೆ ಕೆಳಮಠ ಶ್ರೀ ರುಕ್ಮಿಣಿ ಸತ್ಯಭಾಮ ಸಮೇತ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ನೆರವೇರಿತು. ಉಡುಪಿ ಕುಕ್ಕಿಕಟ್ಟೆ ಕೆ.ಎಸ್.ರಾಮಕೃಷ್ಣ ತಂತ್ರಿ ಮಾರ್ಗದರ್ಶನದಲ್ಲಿ ಅರ್ಚಕರಾದ ನಾರಾಯಣ ಭಟ್, ಲಕ್ಷ್ಮೀಶ ಭಾರದ್ವಾಜ್, ರಾಮಣ್ಣ ಅಡಿಗ, ಅನಂತಕೃಷ್ಣ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

    ಗುರುವಾರ ಬೆಳಗ್ಗೆ ನಡೆದ ಧಾರ್ಮಿಕ ಸಭೆಯಲ್ಲಿ ಕೆ.ಎಸ್.ರಾಮಕೃಷ್ಣ ತಂತ್ರಿ ಆಶೀರ್ವಚನ ನೀಡಿ, ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಸುವುದರಿಂದ ಊರಿಗೆಲ್ಲ ಸುಭಿಕ್ಷೆ ದೊರೆಯುತ್ತದೆ. ಸೇವೆ ಸಲ್ಲಿಸಿದ ಸರ್ವರ ಬದುಕು ಪಾವನವಾಗುತ್ತದೆ. ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿ ಸೇವೆ ಮಾಡುವುದು ಪುಣ್ಯದ ಕೆಲಸ ಎಂದರು.

    ದಾನಿಗಳನ್ನು ಮತ್ತು ಸಹಕಾರ ನೀಡಿದ ಸರ್ವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕಬ್ಬಿನಾಲೆ ಕೆಳಮಠ ಗೋಪಾಲಕೃಷ್ಣ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಕಬ್ಬಿನಾಲೆ ಗುರುಮೂರ್ತಿ ಕಂಗಿನಾಯ ಬೀದರ್, ಅಧ್ಯಕ್ಷ ನಾರಾಯಣ ಭಟ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್ ಭಾರದ್ವಾಜ್, ಧಾರ್ಮಿಕ ಮುಂದಾಳು ಸಮಾಜಸೇವಕ ಹೆಬ್ರಿ ಭಾಸ್ಕರ ಜೋಯಿಸ್, ಅಷ್ಟವಧಾನಿ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್, ಕ್ಷೇತ್ರದ ದರ್ಶನ ಪಾತ್ರಿ ರಮೇಶ ಸೋಮಯಾಜಿ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಕಬ್ಬಿನಾಲೆ ಪ್ರಭಾಕರ ಬಾಯರಿ, ವರಂಗ ವ್ಯವಸಾಯಿಕ ಸಹಕಾರಿ ಸಂಘದ ನಿರ್ದೇಶಕ ಕಬ್ಬಿನಾಲೆ ಚಂದ್ರಶೇಖರ ಬಾಯರಿ, ನಿವೃತ್ತ ಶಿಕ್ಷಕ ರಾಮಕೃಷ್ಣ ಹೆಬ್ಬಾರ್, ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಪೂಜಾರಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ, ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ವಿವಿಧ ಉಪಸಸಮಿತಿಗಳ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

    ಧಾರ್ಮಿಕ ಸಭೆ

    ಸಂಜೆಯ ನಡೆದ ಧಾರ್ಮಿಕ ಸಭೆ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್ ಭಾರದ್ವಾಜ್ ಅಧ್ಯಕ್ಷತೆಯಲ್ಲಿ ನಡೆಯಿತು. ಜ್ಯೋತಿಷಿ ಬಚ್ಚಪ್ಪು ಮಹೇಂದ್ರ ಸೋಮಯಾಜಿ ಧಾರ್ಮಿಕ ಪ್ರವಚನ ನೀಡಿದರು. ಶ್ರಿ ೀಕ್ಷೇತ್ರ ಮೇಲ್ಮಠದ ಧರ್ಮದರ್ಶಿ ಪರಮೇಶ್ವರ ಹೆಬ್ಬಾರ್, ಬಲ್ಲಾಡಿ ಶ್ರಿ ೀಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುಪ್ರಸಾದ್ ಹೆಗ್ಡೆ ಕೊಳಂಬೆ, ಬೆಳಗುಂಡಿ ಶ್ರೀಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುದ್ರಾಡಿ ಶ್ರೀಗುರುರಕ್ಷಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಕಬ್ಬಿನಾಲೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸುಬ್ರಹ್ಮಣ್ಯ ಕಂಗಿನಾಯ, ಕಬ್ಬಿನಾಲೆ ಸಾರ್ವಜನಿಕ ದುರ್ಗಾ ಪೂಜಾ ಸಮಿತಿಯ ಅಧ್ಯಕ್ಷೆ ಉಷಾ ವಸಂತ್, ಮುದ್ರಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಜಗದೀಶ ಪೂಜಾರಿ, ವನಿತಾ, ಸತೀಶ ಗೌಡ, ಪಲ್ಲವಿ ಎಸ್ ಹೆಬ್ಬಾರ್ ಉಪಸ್ಥಿತರಿದ್ದರು. ಕಾಪೋಳಿ ಶ್ರೀಧರ ಹೆಬ್ಬಾರ್, ಕಬ್ಬಿನಾಲೆ ಸೀತಾರಾಮ ಹೆಬ್ಬಾರ್ ಮತ್ತು ಯೋಗೀಶ್ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts