Friday, 14th December 2018  

Vijayavani

ಚಾಮರಾಜನಗರದಲ್ಲಿ ವಿಷವಾದ ಮಾರಮ್ಮನ ಪ್ರಸಾದ- ನಾಲ್ವರ ಸಾವು-40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಜಿಲ್ಲಾಧಿಕಾರಿ ಭೇಟಿ        ರಾಜಸ್ಥಾನ ಸಿಎಂ ಆಗಿ ಆಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್​​ಗೆ ಡಿಸಿಎಂ ಪಟ್ಟ- ಕಾಂಗ್ರೆಸ್​ನಿಂದ ಅಧಿಕೃತ ಘೋಷಣೆ        ಚೆನ್ನೈನ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​ವೈ- ಸಿಎಂ ಎಚ್​ಡಿಕೆ ಚೆನ್ನೈಗೆ ಪ್ರಯಾಣ        ಭದ್ರತೆಗಾಗಿ ರಫೇಲ್ ಖರೀದಿ-ಸುಪ್ರೀಂಕೋರ್ಟ್ ತೀರ್ಪಿನಿಂದ ಭ್ರಮನಿರಸನ-ರಾಗಾ ವಿರುದ್ಧ ಹಾಲಿ ಮಾಜಿ ರಕ್ಷಣಾ ಸಚಿವರ ಕಿಡಿ        ನಾಲ್ಕು ದಿನದಲ್ಲಿ ಎಲ್ಲ ಸರಿಹೋಗುತ್ತೆ-ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ-ಪಿಲ್ಲರ್ ಬಿರುಕಿಗೆ BMRCL ಎಂಡಿ ಸ್ಪಷ್ಟನೆ        ನನಗೂ ಸಚಿವೆಯಾಗುವ ಆಸೆ ಇದೆ- ಅಂತರಂಗ ತೆರೆದಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್- ಕೈ ಸಚಿವಾಕಾಂಕ್ಷಿಗಳ ಪಟ್ಟಿಗೆ ಈಗ ಹೊಸ ಸೇರ್ಪಡೆ       
Breaking News

75,000 ಕ್ಯೂಸೆಕ್ ನೀರು ಹೊರಕ್ಕೆ

Friday, 10.08.2018, 6:01 AM       No Comments

ಎಚ್.ಡಿ.ಕೋಟೆ: ಕಬಿನಿ ಜಲಾಶಯದ ಇತಿಹಾಸದಲ್ಲೇ ಅಪಾರ ಪ್ರಮಾಣದ ನೀರನ್ನು ಹೊರ ಬಿಡುತ್ತಿರುವುದರಿಂದ ಕಪಿಲಾ ನದಿಯ ಪ್ರವಾಹ ಹೆಚ್ಚಳವಾಗಿದೆ.
ನದಿಗೆ 75,000 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದ್ದು ಜಲಾಶಯದ ಮುಂಭಾಗದ ಸೇತುವೆ ಹಾಗೂ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಗಳು ಜಲಾವೃತಗೊಂಡಿವೆ. ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು,ಜನ ಜೀವನ ಅಸ್ತವ್ಯಸ್ತಗೊಂಡಿದೆ.
ತಾಲೂಕಿನ ಚಕ್ಕೂರು ಗ್ರಾಮದ ಸಮೀಪ ಹಾಗೂ ಹೊಮ್ಮರಗಳ್ಳಿ ಗ್ರಾಮದ ಸಮೀಪ ಕಪಿಲಾ ನದಿಗೆ ನಿರ್ಮಿಸಿರುವ ದೊಡ್ಡ ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿವೆ. ಎಚ್.ಡಿ.ಕೋಟೆ ಮತ್ತು ಸರಗೂರು ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ತುಂಬಸೋಗೆ ಸಮೀಪದ ಸೇತುವೆ ಭಾಗಶಃ ಜಲಾವೃತಗೊಳ್ಳುವ ಹಂತದಲ್ಲಿದೆ.ಪ್ರವಾಹದಿಂದ ಹೊಲ ಗದ್ದೆಗಳಿಗೆ ಆಪಾರ ಪ್ರಮಾಣದ ನೀರು ನುಗ್ಗಿ ಬೆಳೆ ನಷ್ಟವಾಗಿದೆ.

Leave a Reply

Your email address will not be published. Required fields are marked *

Back To Top