More

    ಅಪ್ಪು ಹುಟ್ಟುಹಬ್ಬದಂದು ಕಬ್ಜ; ಬಿಡುಗಡೆ ದಿನಾಂಕ ಘೋಷಣೆ

    ಬೆಂಗಳೂರು: ಈ ವರ್ಷದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಕನ್ನಡ ಸಿನಿಮಾ ಕಬ್ಜ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಆರ್. ಚಂದ್ರು ನಿರ್ದೇಶನದ ಉಪೇಂದ್ರ, ಕಿಚ್ಚ ಸುದೀಪ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಕಬ್ಜ ಚಿತ್ರ ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ದಿನವಾದ ಮಾರ್ಚ್ 17ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ.

    ಈ ಬಗ್ಗೆ ನಿರ್ದೇಶಕ ಆರ್. ಚಂದ್ರು, ಕಬ್ಜ ಚಿತ್ರಕ್ಕೆ ಮೊದಲಿಂದಲೂ ಪುನೀತ್ ರಾಜಕುಮಾರ್ ಪ್ರೋತ್ಸಾಹ ನೀಡಿದ್ದರು. ಚಿತ್ರದ ಕೆಲವು ತುಣುಕುಗಳನ್ನು ಅವರಿಗೆ ತೋರಿಸಿದ್ದೆವು. ಆಗ ಹಾಲಿವುಡ್ ಚಿತ್ರ ಇದ್ದಂತಿದೆ ಎಂದು ಹೇಳಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಹೃದಯಿ, ಅಭಿಮಾನಿಗಳ ಪಾಲಿಗಂತೂ ದೇವರೇ ಆಗಿರುವ ಪುನೀತ್ ಹುಟ್ಟುಹಬ್ಬದ ದಿನ ನಮ್ಮ ಕಬ್ಜ ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದೇವೆ. ಅಪು್ಪ ಹುಟ್ಟುಹಬ್ಬ ಹಾಗೂ ಹೊಸ ವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ಸಮೀಪದಲ್ಲಿ ವಿಶ್ವಾದ್ಯಂತ ಕಬ್ಜ ಸಿನಿಮಾ ರಿಲೀಸ್ ಮಾಡಲಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

    ಕಬ್ಜ ಮುಂದೆ, ಪಠಾಣ್ ಹಿಂದೆ: ಐಎಂಡಿಬಿಯಲ್ಲಿ 2023ರ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಏಕೈಕ ಕನ್ನಡ ಸಿನಿಮಾ ಕಬ್ಜ. ಇದೀಗ ರಿಲೀಸ್ ಡೇಟ್ ಘೋಷಣೆಯಾಗುತ್ತಲೇ ಟ್ವಿಟರ್​ನಲ್ಲಿ ಮೊದಲ ಸ್ಥಾನದಲ್ಲಿ ಟ್ರೆಂಡ್ ಆಗಿದೆ. ಪಠಾಣ್ ಇಂದು ಬಿಡುಗಡೆಯಾಗುತ್ತಿದ್ದು, ಆ ಚಿತ್ರವನ್ನೂ ಸಾಮಾಜಿಕ ಜಾಲತಾಣದಲ್ಲಿ ಕಬ್ಜ ಹಿಂದಕ್ಕೆ ಹಾಕಿದೆ.

    ಬಿಟ್ಟಿ ಪ್ರಚಾರಕ್ಕಾಗಿ ಚಿಲ್ರೆ ಕೆಲಸ: ತನ್ನ ಸಂಸ್ಥೆಯ ಮಾರ್ಕೆಟಿಂಗ್​ಗಾಗಿ ಫ್ಲೈಓವರ್​ ಮೇಲಿಂದ ಹಣ ಎಸೆದೆ ಎಂದು ತಪ್ಪೊಪ್ಪಿಕೊಂಡ

    8 ತಿಂಗಳ ಗರ್ಭಿಣಿಗೆ 1 ವಾರವೂ ಸಮಯ ಕೊಡದೆ ಕೆಲಸದಿಂದ ಕಿತ್ತು ಹಾಕಿದ ಗೂಗಲ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts