

ವಿಜಯವಾಣಿ ಸುದ್ದಿಜಾಲ ಕಡಬ
ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ದಸರಾ ಕ್ರೀಡಾಕೂಟ ಸಹಕಾರಿ. ದಸರಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಲ್ಲದೆ ಎಲ್ಲರೂ ಭಾಗವಹಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ದ.ಕ. ಜಿಲ್ಲಾಡಳಿತ, ಜಿಪಂ, ಕಡಬ ತಾಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಕಡಬ ತಾಲೂಕು ಯುವಜನ ಒಕ್ಕೂಟ, ಸವಣೂರು ಯುವಕ ಮಂಡಲ, ಪುತ್ತೂರು ಸಂತ ಫಿಲೋಮಿನಾ ಕಾಲೇಜು ಮತ್ತು ಸವಣೂರು ಸ.ಪ.ಪೂ.ಕಾಲೇಜು ಆಶ್ರಯದಲ್ಲಿ ಸವಣೂರು ಸ.ಪ.ಪೂ.ಕಾಲೇಜಿನ ಕ್ರೀಡಾಂಗಣದಲ್ಲಿ ಕಡಬ ತಾಲೂಕುಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕಡಬ ತಾಪಂ ಇಒ ನವೀನ್‌ಕುಮಾರ್ ಭಂಡಾರಿ ಕ್ರೀಡಾಜ್ಯೋತಿ ಸ್ವೀಕರಿಸಿದರು. ಸವಣೂರು ಗ್ರಾಪಂ ಅಧ್ಯಕ್ಷೆ ಸುಂದರಿ ಬಿ.ಎಸ್. ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಯುವಜನ ಒಕ್ಕೂಟ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಸವಣೂರು ಗ್ರಾಪಂ ಸದಸ್ಯರಾದ ಚಂದ್ರಾವತಿ ಸುಣ್ಣಾಜೆ, ತೀರ್ಥರಾಮ ಕೆಡೆಂಜಿ, ರಫೀಕ್ ಎಂ.ಎ., ಬಾಬು ಎನ್.ಸವಣೂರು, ಸವಣೂರು ಸ.ಪ.ಪೂ.ಕಾಲೇಜು ಪ್ರಾಚಾರ್ಯೆ ಪದ್ಮಾವತಿ ಎನ್.ಪಿ., ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಚಕ್ರಪಾಣಿ ಎ.ವಿ., ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ.ಸವಣೂರು, ಸವಣೂರು ಸರ್ಕಾರಿ ಪ.ಪೂ.ಕಾಲೇಜಿನ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ, ವೀರಮಂಗಲ ಪಿಎಂಶ್ರೀ ಶಾಲೆ ಮುಖ್ಯ ಶಿಕ್ಷಕ ತಾರಾನಾಥ ಸವಣೂರು, ಸವಣೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ರಘು ಬಿ.ಆರ್., ಸವಣೂರು ಸರ್ಕಾರಿ ಪ್ರೌಢಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ, ಉದ್ಯಮಿ ಇಸ್ಮಾಯಿಲ್ ಟಾಸ್ಕೋ ಸವಣೂರು, ಕಡಬ ತಾಲೂಕು ದಸರಾ ಕ್ರೀಡಾಕೂಟ ಸಂಚಾಲಕ ಬಾಲಕೃಷ್ಣ ಕೆ., ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ, ಸವಣೂರು ಯುವಕ ಮಂಡಲ ಕಾರ್ಯದರ್ಶಿ ರಾಜೇಶ್ ಇಡ್ಯಾಡಿ, ಮಾಜಿ ಅಧ್ಯಕ್ಷ ಸಚಿನ್ ಸವಣೂರು ಮೊದಲಾದವರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಕಾರ್ಯಕ್ರಮಕ್ಕೆ ಭೇಟಿ ನೀಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೋಡಲ್ ಅಧಿಕಾರಿ ಮಾಮಚ್ಚನ್ ಎಂ. ಸ್ವಾಗತಿಸಿದರು. ಸವಣೂರು ಸಿಎ ಬ್ಯಾಂಕ್ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು ವಂದಿಸಿದರು.
ಗ್ರಾಮೀಣ ಭಾಗದಲ್ಲಿ ಯುವಜನ ಚಟುವಟಿಕೆಗಳು ನಡೆಯುವಂತಾಗಲು ತಾಲೂಕುಮಟ್ಟದ ಯುವಜನ ಮೇಳ ಹಾಗೂ ಯುವಜನ ಸೇವಾ ಕ್ರೀಡಾಧಿಕಾರಿಗಳ ನೇಮಕ ಅವಶ್ಯಕ. ಈ ನಿಟ್ಟಿನಲ್ಲಿ ಇಲಾಖೆ ಸಚಿವರು ಹಾಗೂ ಕಾರ್ಯದರ್ಶಿಗಳನ್ನು ಭೇಟಿ ಮಾಡಲು ಯುವ ಸಂಘಟನೆಗಳಿಗೆ ಅವಕಾಶ ಕಲ್ಪಿಸುತ್ತೇನೆ. ಭಾಗೀರಥಿ ಮುರುಳ್ಯ, ಶಾಸಕಿ