30ರಂದು ಕಡಬ ತಾಲೂಕು ಸಾಹಿತ್ಯ ಸಮ್ಮೇಳನ : ಕುಂತೂರು ಪದವು ಸಂತ ಜಾರ್ಜ್ ಪ್ರೌಢಶಾಲೆಯಲ್ಲಿ ಆಯೋಜನೆ

New Project (10)
Published on

ಕಡಬ: ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನ.30 ನಡೆಯಲಿದೆ ಎಂದು ಕ.ಸಾ.ಪ ಕಡಬ ತಾಲೂಕು ಘಟಕದ ಅಧ್ಯಕ್ಷ ಸೇಸಪ್ಪ ರೈ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ ಶಾಲಾ ಮುಂಭಾಗದಿಂದ ಕನ್ನಡ ಭುವನೇಶ್ವರಿ ಮೆರವಣಿಗೆಗೆ ಪೆರಾಬೆ ಗ್ರಾಪಂ ಸದಸ್ಯ ಪಿ.ಜಿ.ರಾಜು ಚಾಲನೆ ನೀಡಲಿದ್ದಾರೆ. ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆ ನಡೆಸಲಿದ್ದಾರೆ. ಪೆರಾಬೆ ಗ್ರಾಪಂ ಅಧ್ಯಕ್ಷೆ ಸಂಧ್ಯಾ ಕೆ.ರಾಷ್ಟ್ರ ಧ್ವಜಾರೋಹಣ, ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ.ಎಂ. ಪಿ ಶ್ರೀನಾಥ ಪರಿಷತ್ತು ಧ್ವಜಾರೋಹಣ, ನಾಡ ಧ್ವಜರೋಹಣವನ್ನು ಕ.ಸಾ.ಪ ಕಡಬ ತಾಲೂಕು ಅಧ್ಯಕ್ಷ ಸೇಸಪ್ಪ ರೈ ನೆರವೇರಿಸಲಿದ್ದಾರೆ. ಸಾಹಿತಿ ಡಾ.ವಸಂತ ಕುಮಾರ್ ಪೆರ್ಲ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸಾಮಾಜಿಕ ಮುಂದಾಳು ಎನ್.ಕರುಣಾಕರ ಗೋಗಟೆ ಸಮ್ಮೇಳನ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ದೀಪಪ್ರಜ್ವಲನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ನಿತಿನ್ ಮ್ಯಾಥ್ಯೂ ಆಶೀರ್ವಚನ ನೀಡಲಿದ್ದಾರೆ. ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತರಾಮ ರೈ ಕಲಾ ಪ್ರದರ್ಶನ, ಕಡಬ ತಹಸೀಲ್ದಾರ ಪ್ರಭಾಕರ ಖಜೂರೆ ವಿಜ್ಞಾನ ವಸ್ತು ಪ್ರದರ್ಶನ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಾಚ್ಯವಸ್ತು ಪ್ರದರ್ಶನ, ಕಡಬ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಪುಸ್ತಕ ಪ್ರದರ್ಶನ ಉದ್ಘಾಟಿಸಲಿದ್ದಾರೆ.

ವಿಚಾರಗೋಷ್ಠಿ, ಕೃತಿ ಬಿಡುಗಡೆ, ಸಾಂಸ್ಕೃತಿಕ ಕಾರ್ಯಕ್ರಮ, ಕವಿಗೋಷ್ಠಿ, ಸಮ್ಮೇಳಾಧ್ಯಕ್ಷರೊಂದಿಗೆ ಸಂವಾದ, ಸಾಧಕರಿಗೆ ಸನ್ಮಾನ, ನಡೆಯಲಿದೆ. ಸಾಯಂಕಾಲ ಸಮರೋಪದ ಅಧ್ಯಕ್ಷತೆಯನ್ನು ಕ.ಸಾ.ಪ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ ವಹಿಸಲಿದ್ದಾರೆ. ಪುತ್ತೂರು ವಿವೇಕಾನಂದ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ ಎಚ್.ಜಿ.ಸಮರೋಪ ಭಾಷಣ ಮಾಡಲಿದ್ದಾರೆ ಎಂದು ಸೇಸಪ್ಪ ರೈ ತಿಳಿಸಿದರು.

ಕ.ಸಾ.ಪ ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ, ಗೌರವ ಕೋಶಾಧಿಕಾರಿ ಬಾಲಚಂದ್ರ ಮುಚ್ಚಿಂತ್ತಾಯ, ಸ್ವಾಗತ ಸಮಿತಿ ಅಧ್ಯಕ್ಷ ಗುರುರಾಜ್ ರೈ ಕೇವಳ, ಮುಖ್ಯಶಿಕ್ಷಕ ಹರಿಶ್ಚಂದ್ರ ಕೆ, ಆರ್ಥಿಕ ಸಮಿತಿ ಸಂಚಾಲಕ ವಿ.ಐ.ಅಬ್ರಾಹಂ, ಶಿಕ್ಷಕಿ ಪ್ರೇಮಾ, ಕ.ಸಾ.ಪ ಕಡಬ ಘಟಕ ಮಾಜಿ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net