21.7 C
Bengaluru
Tuesday, January 21, 2020

ಬಡಾ ಎರ್ಮಾಳು, ಪಡುಬಿದ್ರಿಯಲ್ಲಿ ಕಡಲ್ಕೊರೆತ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

< ಹಲವು ಮರಗಳು ನೀರುಪಾಲು * ರಸ್ತೆ ಸಂಪರ್ಕ ಕಡಿತ ಭೀತಿ>

ಪಡುಬಿದ್ರಿ: ಬಡಾ ಉಚ್ಚಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಾ ಎರ್ಮಾಳು ಹಾಗೂ ಪಡುಬಿದ್ರಿ ಗ್ರಾಪಂ ವ್ಯಾಪ್ತಿಯ ವಿವಿಧೆಡೆ ಶುಕ್ರವಾರ ಕಡಲ್ಕೊರೆತ ತೀವ್ರಗೊಂಡಿದ್ದು, ಹಲವೆಡೆ ಮರಗಳು ಸಮುದ್ರಪಾಲಾಗಿವೆ.
ಮೂರು ದಿನಗಳಿಂದ ಕಡಲ್ಕೊರೆತ ಕಾಣಿಸಿಕೊಂಡಿರುವ ಬಡಾ ಎರ್ಮಾಳಿನ ಮೀರಾ ಕರ್ಕೇರ ಮನೆ ಸಮೀಪ ಹಲವು ತೆಂಗಿನ ಮರಗಳು ಸಮುದ್ರ ಪಾಲಾಗಿದ್ದು, ಶುಕ್ರವಾರ ಮತ್ತೆರಡು ತೆಂಗಿನ ಮರಗಳು ಕೊರೆತಕ್ಕೆ ಸಿಲುಕಿವೆ. ಇಲ್ಲಿ ಕೊರೆತ 5 ಮೀಟರ್ ವಿಸ್ತಾರಗೊಂಡಲ್ಲಿ ಈ ಭಾಗದಲ್ಲಿ ಹಾದು ಹೋಗುವ ಮೀನುಗಾರಿಕಾ ರಸ್ತೆ ಸಂಪರ್ಕ ಕಡಿತಗೊಳ್ಳಲಿದೆ. ಇಲ್ಲಿನ ಜನ ಕಲ್ಲು ಹಾಕುವ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದರೂ, ಕೊರೆತ ತಡೆಯಲು ಈವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಸ್ಥಳಕ್ಕೆ ಬಡಾ ಗ್ರಾಪಂ ಅಧ್ಯಕ್ಷೆ ಶರ್ಮಿಳಾ ಡಿ. ಸಾಲ್ಯಾನ್, ಪಿಡಿಒ ಕುಶಾಲಿನಿ ಮತ್ತಿತರರು ಭೇಟಿ ನೀಡಿದ್ದಾರೆ.

ಪಡುಬಿದ್ರಿಯ ಕಾಡಿಪಟ್ಣ, ಮಧ್ವನಗರ ಹಾಗೂ ನಡಿಪಟ್ಣ ಪ್ರದೇಶಗಳಲ್ಲಿ ಕಡಲ್ಕೊರೆತ ಕಾಣಿಸಿಕೊಂಡಿದ್ದು, ನಡಿಪಟ್ಣದಲ್ಲಿ ಕಡಲ ಕಿನಾರೆಯಲ್ಲಿ ಬೀಚ್ ನಿರ್ವಹಣಾ ಸಮಿತಿ ನಿರ್ಮಿಸಿರುವ ಕಾಂಕ್ರೀಟ್ ರಚನೆ ಭಾಗಶಃ ಹಾನಿಗೊಂಡಿದೆ. ಇಲ್ಲಿನ ಶ್ರೀ ವಿಷ್ಣು ಭಜನಾ ಮಂದಿರ ಬಳಿಯೂ ಕೊರೆತ ತೀವ್ರವಾಗಿದ್ದು, ಕಡಲ ತೀರದಲ್ಲಿರುವ ಗಾಳಿ ಮರಗಳು ಸಮುದ್ರ ಪಾಲಾಗಿವೆ. ಕಾಡಿಪಟ್ಣ ರಾಘು ಸಾಲ್ಯಾನ್ ಮನೆ ಬಳಿ ಕೊರೆತದಿಂದ ಮರಗಳು ಅಪಾಯದಲ್ಲಿವೆ. ಕೊರೆತ ಹೆಚ್ಚಾದಲ್ಲಿ ಸಮುದ್ರದಿಂದ 10 ಮೀಟರ್ ಅಂತರದಲ್ಲಿರುವ ಮೀನುಗಾರಿಕಾ ರಸ್ತೆ ಸಂಪರ್ಕ ಕಡಿತಗೊಳ್ಳಲಿದೆ. ಸಮುದ್ರ ಅಲ್ಲಲ್ಲಿ ಕುಳಿ ಬಿದ್ದಿದ್ದು, ಕೊರೆತ ಇನ್ನಷ್ಟು ತೀವ್ರವಾಗಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ತಹಸೀಲ್ದಾರ್ ಭೇಟಿ: ಬಡಾ ಎರ್ಮಾಳು ಕಡಲ್ಕೊರೆತ ಪ್ರದೇಶಕ್ಕೆ ಕಾಪು ತಹಸೀಲ್ದಾರ್ ಇಸಾಕ್ ಮಹಮ್ಮದ್ ಭೇಟಿ ನೀಡಿ ಪರಿಶೀಲಿಸಿದರು. ಮೇಲಧಿಕಾರಿಗಳಿಗೆ ವರದಿ ನೀಡಿ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ಸ್ಥಳೀಯರು ಮನವಿ ಮಾಡಿದರು. ಕಂದಾಯ ಪರಿವೀಕ್ಷಕ ರವಿಶಂಕರ್, ಗ್ರಾಮಕರಣಿಕ ಜಗದೀಶ್, ಗ್ರಾಪಂ ಸದಸ್ಯ ಶಿವಕುಮಾರ್ ಮೆಂಡನ್ ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...