23.2 C
Bangalore
Saturday, December 14, 2019

ಮಂಗನ ಕಾಯಿಲೆ ಭೀತಿ: ಕದಂಬೋತ್ಸವ ಮುಂದೂಡಿಕೆ

Latest News

ನಾಡು-ನುಡಿ ರಕ್ಷಣೆಗೆ ಸೇವಾ ಮನೋಭಾವ ಅಗತ್ಯ

ಜಗಳೂರು: ಜಗಳೂರಿನಲ್ಲಿ ರಾಜ್ಯ ಮಟ್ಟದ ಯುವಜನ ಮೇಳ ಆಯೋಜಿಸುವ ಚಿಂತನೆ ಇದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ ಎನ್‌ಎಂಕೆ ಪ್ರೌಢಶಾಲೆ ಸಭಾಂಗಣದಲ್ಲಿ...

ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲನೆ ನಡೆಸಿದ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಚನ್ನಗಿರಿ: ಕ್ಷೇತ್ರದ ಅಭಿವೃದ್ಧಿ ನನ್ನ ಗುರಿ. ಟೆಂಡರ್ ಮೂಲಕ ಕಾಮಗಾರಿ ಹಿಡಿಯುವ ಗುತ್ತಿಗೆದಾರರು ಗುಣಮಟ್ಟದ ಕೆಲಸ ನಿರ್ವಹಿಸಬೇಕು. ಕಳಪೆಯಾದರೆ ಅಂಥವರನ್ನು ಕಪ್ಪುಪಟ್ಟಿಗೆ ಸೇರಿಸುವುದಾಗಿ...

ಹಾಸ್ಟೆಲ್‌ಗೆ ಶಾಸಕರ ದಿಢೀರ್ ಭೇಟಿ

ರಬಕವಿ/ಬನಹಟ್ಟಿ: ರಬಕವಿ ನಗರದ ಹೆಸ್ಕಾಂ ಕಚೇರಿ ಸಮೀಪದಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಶಾಸಕ ಸಿದ್ದು ಸವದಿ ಶುಕ್ರವಾರ...

ಫಾರೂಕ್ ಅಬ್ದುಲ್ಲಾ ಗೃಹ ಬಂಧನ ಮೂರು ತಿಂಗಳು ವಿಸ್ತರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗೃಹ ಬಂಧನದಲ್ಲಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಬಂಧನವನ್ನು ಕೇಂದ್ರ ಸರ್ಕಾರ ಶನಿವಾರ ಮೂರು ತಿಂಗಳು ವಿಸ್ತರಿಸಿದೆ. ಐದು ಬಾರಿ...

ಸಂಭ್ರಮದ ದ್ಯಾಮವ್ವನ ಸೋಂಗಿನ ಮೆರವಣಿಗೆ

ಬಸವನಬಾಗೇವಾಡಿ: ಪಟ್ಟಣದ ಶ್ರೀ ಗೌರಿಶಂಕರ ಜಾತ್ರಾ ಮಹೋತ್ಸವ ಅಂಗವಾಗಿ ಶನಿವಾರ ಮಧ್ಯಾಹ್ನ ದ್ಯಾಮವ್ವನ ಸೋಂಗಿನ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು.ಪಟ್ಟಣದ...

ಕಾರವಾರ: ಮಂಗನ ಕಾಯಿಲೆ ಭೀತಿ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯಲ್ಲಿ ಫೆಬ್ರವರಿ 9 ಮತ್ತು 10ರಂದು ನಡೆಯಬೇಕಿದ್ದ ಕದಂಬೋತ್ಸವನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಫೆಬ್ರವರಿ 9 ಮತ್ತು 10ರಂದು ಕದಂಬೋತ್ಸವನ್ನು ನಡೆಸಲು ಜಿಲ್ಲಾಡಳಿತ ಈಗಾಗಲೇ ಅಂತಿಮ ಹಂತದ ಸಿದ್ಧತೆಗಳನ್ನು ನಡೆಸಿತ್ತು. ಬನವಾಸಿ ಮತ್ತು ಸಮೀಪದಲ್ಲಿ ಮಂಗಗಳು ಶಂಕಾಸ್ಪದವಾಗಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಎಲ್ಲ ಅಧಿಕಾರಿಗಳು ರೋಗ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿರುವುದರಿಂದ ಈ ದಿನಾಂಕಗಳಂದು ನಡೆಯಬೇಕಿದ್ದ ಕದಂಬೋತ್ಸವನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಂಗನ ಕಾಯಿಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಈಗಾಗಲೇ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಶಂಕಿತ ಪ್ರದೇಶಗಳಲ್ಲಿ ಲಸಿಕೆಗಳನ್ನು ಹಾಕಲಾಗಿದೆ. ಕಾಡಿನ ಸಂಪರ್ಕದಲ್ಲಿರುವ ಗ್ರಾಮಗಳ ಜನರಿಗೆ ಔಷಧಗಳ ವಿತರಣೆ, ಡಿಎಂಪಿ ತೈಲ ಲೇಪನ ಹಾಗೂ ದನ-ಕುರಿ ಕೊಟ್ಟಿಗೆಗಳಿಗೆ ಉಣ್ಣೆ ನಿಯಂತ್ರಣ ಔಷಧಗಳ ಸಿಂಪಡಣೆ ಸೇರಿದಂತೆ ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೆ, ಜಿಲ್ಲೆಗೆ ಹೆಚ್ಚುವರಿ ಔಷಧಗಳನ್ನು ಸರಬರಾಜು ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಆದರೆ, ಬನವಾಸಿ ಸಮೀಪ ಇತ್ತೀಚೆಗೆ ಮಂಗವೊಂದು ಮೃತಪಟ್ಟಿತ್ತು. ಅದರ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ ಮಂಗನ ಕಾಯಿಲೆ ಇರುವುದು ದೃಢಪಟ್ಟಿತ್ತು. ಹಾಗಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳು ಮಂಗನ ಕಾಯಿಲೆ ಉಲ್ಬಣವಾಗದಂತೆ ತಡೆಗಟ್ಟುವ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕಿದೆ. ಈ ಸಂದರ್ಭದಲ್ಲಿ ಕದಂಬೋತ್ಸವ ಆಚರಿಸುವುದು ಕಷ್ಟಸಾಧ್ಯವಿರುವ ಕಾರಣ ಸದ್ಯಕ್ಕೆ ಕದಂಬೋತ್ಸವನ್ನು ಮುಂದೂಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...