

ಬೆಂಗಳೂರು: ವಿಧಾನಸೌಧಕ್ಕೂ ವ್ಯಾಪಿಸಿರುವ ಕರೊನಾ ಸೋಂಕು ಇದೀಗ ವಿಧಾನಸಭಾಧ್ಯಕ್ಷ-ಸಭಾಪತಿಗೂ ಸೋಕಿದೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇಬ್ಬರಲ್ಲೂ ಕೋವಿಡ್-19 ಸೋಂಕು ದೃಢಪಟ್ಟಿದೆ.
ಕೋವಿಡ್-19 ಪರೀಕ್ಷಾ ವರದಿ ಪಾಸಿಟಿವ್ ಬಂದಿರುವುದು ತಿಳಿಯುತ್ತಿದ್ದಂತೆ ಕಾಗೇರಿಯವರು ತಮ್ಮ ಊರಾದ ಶಿರಸಿಯ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಆದರೆ ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಟೆಸ್ಟ್‌ಗೆ ಒಳಗಾಗಿ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಬ್ಬರೂ ಕೋರಿಕೊಂಡಿದ್ದಾರೆ.