25.5 C
Bangalore
Monday, December 16, 2019

ಕೈಗಾ-ಕಾರವಾರ ಓಡಾಟ ದುಸ್ತರ

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಕಾರವಾರ ನಗರದಿಂದ ಕಿನ್ನರ ಮಾರ್ಗವಾಗಿ ಕೈಗಾ ತಲುಪುವ ರಸ್ತೆ ಹೊಂಡಮಯವಾಗಿದ್ದು, ಸಂಚಾರಕ್ಕೆ ತೊಂದರೆಯಾಗಿದೆ.

- Advertisement -

ಕಾರವಾರ-ಕೈಗಾ-ಗಜೇಂದ್ರಗಡ-ಇಳಕಲ್ ರಾಜ್ಯ ಹೆದ್ದಾರಿ ಇದಾಗಿದ್ದು, ನಗರದ ಹಬ್ಬುವಾಡದಿಂದ 69 ಕಿಮೀ ಕಾರವಾರ ಲೋಕೋಪಯೋಗಿ ವಿಭಾಗದ ವ್ಯಾಪ್ತಿಗೆ ಸೇರುತ್ತದೆ. ಕೈಗಾದ ಭಾರ ವಾಹನಗಳು ರಾಷ್ಟ್ರೀಯ ಹೆದ್ದಾರಿ ತಲುಪಲು ಇರುವ ಪರ್ಯಾಯ ರಸ್ತೆ ಇದಾಗಿದೆ. ಅಲ್ಲದೆ, ಕಿನ್ನರ, ಸಿದ್ದರ, ಕೆರವಡಿ, ದೇವಳಮಕ್ಕಿ ಸೇರಿ ಹಲವು ಗ್ರಾಮಗಳನ್ನು ಸಂರ್ಪಸುವ ಪ್ರತಿದಿನ ನೂರಾರು ವಾಹನ ಓಡಾಡುವ ರಸ್ತೆಯಾಗಿದೆ. ಅತೀ ಹೆಚ್ಚು ತಿರುವುಗಳಿಂದ ಕೂಡಿದ್ದರಿಂದ ಅಪಘಾತಗಳು ಹೆಚ್ಚುತ್ತಿವೆ. ಈ ನಡುವೆ ಮಳೆಗಾಲ ಪ್ರಾರಂಭವಾದ ನಂತರ ರಸ್ತೆಯಲ್ಲಿ ಸಾಕಷ್ಟು ಹೊಂಡ ಬಿದ್ದಿದ್ದು, ಸಂಚಾರ ಕಷ್ಟವಾಗಿದೆ.

ಶಿರವಾಡದಿಂದ ಮಂದ್ರಾಳಿವರೆಗೆ ನಂತರ ಖಾರ್ಗಾದಿಂದ ಮಲ್ಲಾಪುರವರೆಗೂ ಹಲವೆಡೆ ಹೊಂಡಗಳು ಬಿದ್ದಿವೆ. ಚರಂಡಿ ಇಲ್ಲದೆ ಮಳೆಯ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ.

ಕಾರವಾರ-ಕೈಗಾ-ಗಜೇಂದ್ರಗಡ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ: ಕಾರವಾರ-ಕೈಗಾ-ಗಜೇಂದ್ರಗಡ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ರಸ್ತೆಯ ವಿಸ್ತ್ರತ ಯೋಜನಾ ವರದಿ ಇನ್ನಷ್ಟೇ ಸಿದ್ಧವಾಗಬೇಕಿದೆ. ಅಲ್ಲಿಯವರೆಗೆ ಪಿಡಬ್ಲ್ಯುಡಿ ನಿರ್ವಹಣೆಯ ಜವಾಬ್ದಾರಿ ಹೊತ್ತಿದೆ.

ಮುಗಿಯುವ ಮೊದಲೇ ಕಿತ್ತ ರಸ್ತೆ: ಕಡವಾಡದ ಮಂದ್ರಾಳಿಯಿಂದ 9.5 ಕಿಮೀಯಷ್ಟು ರಸ್ತೆಯನ್ನು 7 ಕೋಟಿ ರೂ.ಗಳ ಕೇಂದ್ರ ರಸ್ತೆ ನಿಧಿಯಡಿ ಅಭಿವೃದ್ಧಿಪಡಿಸಲಾಗಿದೆ. ಚರಂಡಿ ನಿರ್ವಣ, ರಸ್ತೆ ವಿಸ್ತರಣೆ, ಮರು ಡಾಂಬರೀಕರಣ ಕಾರ್ಯ ಮಾಡಲಾಗಿದೆ. ಕಾಮಗಾರಿ ಇನ್ನೂ ಮುಗಿಯುವ ಮೊದಲೇ ಹಲವೆಡೆ ರಸ್ತೆ ಕುಸಿದಿದೆ. ಡಾಂಬರಿಗೆ ಹಾಕಿದ ಜಲ್ಲಿ ಎದ್ದು, ಬಂದಿದೆ. ಉಬ್ಬು, ತಗ್ಗು ಉಂಟಾಗಿದ್ದು, ದ್ವಿಚಕ್ರ ವಾಹನಗಳು ಅಪಘಾತ ಸಂಭವಿಸುವ ಪರಿಸ್ಥಿತಿ ಇದೆ.

ಕಿತ್ತೆದ್ದು ಹೋದ ಶಿರ್ವೆ ರಸ್ತೆ: ಕಾರವಾರ ತಾಲೂಕಿನ ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರ್ವೆ ರಸ್ತೆ ಸಂಪೂರ್ಣ ಹಾಳಾಗಿದ್ದು, ಓಡಾಟ ದುಸ್ತರವಾಗಿದೆ. ದೇವಳಮಕ್ಕಿಯಿಂದ ಶಿರ್ವೆವರೆಗೆ 2ಕಿಮೀ ಈ ಹಿಂದೆ ಮಾಡಿದ ರಸ್ತೆಯ ಅವಶೇಷಗಳು ಮಾತ್ರ ಉಳಿದುಕೊಂಡಿವೆ. ಇನ್ನರ್ಧ ದೂರ ಖಡಿ ಹಾಕಿ ರಸ್ತೆ ನಿರ್ಮಾಣ ಮಾಡದೇ ಹಾಗೆಯೇ ಬಿಡಲಾಗಿದೆ. ಒಟ್ಟಾರೆ ಶಿರ್ವೆ ಗ್ರಾಮಕ್ಕೆ ಸಂಚರಿಸಲು ಹರಸಾಹಸಪಡಬೇಕಿದೆ. ಗ್ರಾಮದಲ್ಲಿ ಸುಮಾರು 80 ಕ್ಕೂ ಹೆಚ್ಚು ಮನೆಗಳಿದ್ದು, ಇತರ ಹಲವು ಗ್ರಾಮಗಳಿಗೂ ಇದರಿಂದ ಅನುಕೂಲವಾಗಿದೆ. ಗ್ರಾಮಕ್ಕೆ ಯಾವುದಾದರೂ ಯೋಜನೆಯಲ್ಲಿ ಶೀಘ್ರ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎಂದು ಜಿಲ್ಲಾ ಪಂಚಾಯಿತಿಗೆ ವಿನಂತಿಸಿದ್ದಾಗಿ ತಾಪಂ ಮಾಜಿ ಸದಸ್ಯ ಶ್ರೀಪಾದ ಗೌಡ ಹೇಳುತ್ತಾರೆ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...