

ಬೈಂದೂರು: ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕ ಜಿಲ್ಲಾಧ್ಯಕ್ಷೆಯಾಗಿ ಶಯದೇವಿಸುತೆ (ಜ್ಯೋತಿ ಜೀವನ್ ಸ್ವರೂಪ್) ಮರವಂತೆ ಅವರನ್ನು ನೇಮಕ ಮಾಡಿ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಆದೇಶ ನೀಡಿದ್ದಾರೆ. ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್‌ನ ಆಜೀವ ಸದಸ್ಯೆಯಾಗಿದ್ದಾರೆ. ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ, ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.