More

    ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಡಿ. 25ರಂದು

    ರಾಣೆಬೆನ್ನೂರ: ಇಲ್ಲಿಯ ಕಾಕಿ ಜನಸೇವಾ ಸಂಸ್ಥೆ, ಕುರುಹಿನಶೆಟ್ಟಿ ಸಮಾಜ ಸೇವಾ ಸಂಘ, ಜೆಸಿಐ ಹಾಗೂ ಜೆಸಿಸ್ ಕ್ಷೇಮಾಭಿವೃದ್ಧಿ ಕ್ರೆಡಿಟ್ ಕೋ-ಆಪ್ ಸೊಸೈಟಿ ವತಿಯಿಂದ ಶ್ರೀ ನೀಲಕಂಠೇಶ್ವರ ಸ್ವಾಮಿ ಕಾರ್ತಿಕೋತ್ಸವ ಪ್ರಯುಕ್ತ ಡಿ. 25ರಂದು ನಗರದ ನೀಲಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ತಿಳಿಸಿದರು.
    ನಗರದ ನೀಲಕಂಠೇಶ್ವರ ದೇವಸ್ಥಾನದ ಗಣೇಶೋತ್ಸವ ಮಂಟಪದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರಿಗೆ ಅನುಕೂಲವಾಗುವ ದೃಷ್ಠಿಯಿಂದ ಪ್ರತಿವರ್ಷ ಕುರುಹಿನಶೆಟ್ಟಿ ಸಮಾಜ ಹಾಗೂ ನಮ್ಮ ಸಂಸ್ಥೆ ವತಿಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡುತ್ತ ಬಂದಿದ್ದೇವೆ.
    ಡಿ. 24ರಂದು ಸಂಜೆ 6ಗಂಟೆಗೆ ಪ್ರತಿಯೊಂದು ವಧು-ವರ ಜೋಡಿಗೆ ಪ್ರತ್ಯೇಕ ಸಾರೋಟದಲ್ಲಿ ನಗರದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು. ಡಿ. 25ರಂದು ಬೆಳಗ್ಗೆ 10ಗಂಟೆಗೆ ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಧರ್ಮಸಭೆ ಜರುಗಲಿದೆ. ಸಂಜೆ 7ಗಂಟೆಗೆ ಶ್ರೀ ನೀಲಕಂಠೇಶ್ವರ ಸ್ವಾಮಿ ಕಾರ್ತಿಕೋತ್ಸವ ಜರುಗುವುದು.
    ಮದುವೆಯಾಗಲು ಇಚ್ಚಿಸುವವರು ಡಿ. 10ರ ಒಳಗಾಗಿ ಹೆಸರು ನೋಂದಾಯಿಸಬೇಕು ಎಂದು ತಿಳಿಸಿದರು.
    ಕುರುಹಿನಶೆಟ್ಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಹನುಮಂತಪ್ಪ ಅಮಾಸಿ, ಉಪಾಧ್ಯಕ್ಷ ಶಿವಾನಂದ ಸಾಲಗೇರಿ, ಸದಸ್ಯರಾದ ಹನುಮಂತಪ್ಪ ಕಾಕಿ, ಸಣ್ಣ ಹನುಮಂತಪ್ಪ ಕಾಕಿ, ಸಿದ್ದಪ್ಪ ಬೂದುರು, ಭೀಮಣ್ಣ ಕಾಕಿ, ಶೋಭಾ ಹೊಸಪೇಟೆ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts