ಸಂಗೀತ ಶರ್ಮಗೆ ಕಲಾ ಸಂಕುಲ ಶಿಕ್ಷಕ ರತ್ನ ಪ್ರಶಸ್ತಿ

Btw_Sangeetha-Sharma

ಬಂಟ್ವಾಳ: ಕಲಾ ಸಂಕುಲ ಸಂಸ್ಥೆ ರಾಯಚೂರು ವತಿಯಿಂದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ರಾಯಚೂರು ನಗರದ ರಂಗಮಂದಿರದಲ್ಲಿ ಸೆ.8ರಂದು ನಡೆಯಲಿದ್ದು, ಈ ಸಂದರ್ಭ ಪ್ರದಾನ ಮಾಡಲಿರುವ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆಯಾಗಿದ್ದಾರೆ.

ಶಾಲಾ ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಪಠ್ಯೇತರ ಚಟುವಟಿಕೆಗಳು ಹಾಗೂ ಶಾಲಾ ಭೌತಿಕ ಅಭಿವೃದ್ಧಿಗೆ ತೊಡಗಿಸಿಕೊಂಡು ಸಮುದಾಯದ ಜತೆಗೆ ಉತ್ತಮ ಬಾಂಧವ್ಯ ಹೊಂದಿರುವುದನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಗೊಳಿಸಲಾಗಿದೆ.

ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ, ಸಣ್ಣ ನೀರಾವರಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹಾಗೂ ರಾಯಚೂರು ಸಂಸದ ಜಿ.ಕುಮಾರ್ ನಾಯಕ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Spirituality: ಇರುವೆಗಳಿಗೆ ಆಹಾರ ನೀಡಿದರೆ ಶನಿದೇವನ ಪ್ರಭಾವ ಇರುವುದಿಲ್ಲವೇ?

Spirituality: ನಮ್ಮಲ್ಲಿರುವ ವಸ್ತು ಅಥವಾ ಯಾವುದೇ ಪದಾರ್ಥವನ್ನು ಇಲ್ಲದವರಿಗೆ ದಾನ ಮಾಡಿದರೆ ದೇವರ ಅನುಗ್ರಹ ಸದಾ…

2025ರಲ್ಲಿ ಸಾಲದ ಸುಳಿಗೆ ಸಿಲುಕಲಿದ್ದಾರಂತೆ ಈ 3 ರಾಶಿಯವರು!? ಹಣಕಾಸಿನ ವಿಚಾರದಲ್ಲಿ ಬಹಳ ಎಚ್ಚರ | Money

Money : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…

30 ನೇ ವಯಸ್ಸಿನಲ್ಲಿಯೇ ಕೂದಲು ಬಿಳಿ ಬಣ್ಣಕ್ಕೆ ತಿರುಗುತ್ತಿದೆಯೇ? White Hair ಆಗಿದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ

White Hair : ಇಂದಿನ ಕಾಲದಲ್ಲಿ ಜನರ ಕೂದಲು ಚಿಕ್ಕ ವಯಸ್ಸಿನಲ್ಲೇ ಬೆಳ್ಳಗಾಗುತ್ತಿದೆ. ಇನ್ನು ಕೆಲವರು…