More

    ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ಬಿಎಸ್​ವೈ ವೈಮಾನಿಕ ಸಮೀಕ್ಷೆ

    ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು (ಅ. 21) ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡರು.

    ಬಳ್ಳಾರಿಯ ತೋರಣಗಲ್​ನಿಂದ ಹೆಲಿಕ್ಯಾಪ್ಟರ್​ನಲ್ಲಿ ಹೊರಟ ಸಿಎಂ ಬಿಎಸ್​ವೈ, ಭಾರಿ ಮಳೆಯಿಂದ ಉಂಟಾದ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.

    ಇದನ್ನೂ ಓದಿ: ಟ್ವೀಟ್​ ಮೂಲಕ ಮತ್ತೊಮ್ಮೆ ಗುಡುಗಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​..!

    ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಪ್ರದೇಶಗಳು ಪ್ರವಾಹದ ಹೊಡೆತಕ್ಕೆ ಸಿಲುಕಿವೆ. ಅಪಾರ ಬೆಳೆ ಹಾನಿ ಸಂಭವಿಸಿದ್ದು, ಅಲ್ಲಲ್ಲಿ ಮನೆ ಕುಸಿತ ಪ್ರಕರಣಗಳು ವರದಿಯಾಗಿವೆ. ಎರಡು ದಿನಗಳ ಹಿಂದಷ್ಟೇ ಕಂದಾಯ ಸಚಿವ ಆರ್​. ಅಶೋಕ್​ ಅವರು ಪ್ರವಾಸ ಮಾಡಿದ್ದರು.

    ಇಂದು ಸಿಎಂ ಬಿಎಸ್​ವೈ ವೈಮಾನಿಕ ಸಮೀಕ್ಷೆ ನಡೆಸಿದ್ದು, ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಶಿರಾ ಬೈ ಎಲೆಕ್ಷನ್​ಗೆ ಎಚ್​.ಡಿ.ದೇವೇಗೌಡ ಎಂಟ್ರಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts