More

    ಜೈಲಿಂದ ಪರಾಗಿಯಾದ್ದವ 3 ವರ್ಷದ ಬಳಿ ಅರೆಸ್ಟ್

    ಕಲಬುರಗಿ: ನಗರದ ಹೊರವಲಯದಲ್ಲಿನ ಸೆಂಟ್ರಲ್ ಜೈಲಿನಿಂದ ಪರಾರಿಯಾಗಿದ್ದ ಅಪರಾಧಿಯನ್ನು ಮೂರು ವರ್ಷದ ನಂತರ ಫರತಾಬಾದ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ನಿರ್ಣಾ ಗ್ರಾಮದ ಬಳಿ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ರಮೇಶನನ್ನು ಶುಕ್ರವಾರ ಬಂಧಿಸಲಾಗಿದೆ. ಪೋಕ್ಸೋ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಚಿಂಚೋಳಿ ತಾಲೂಕಿನ ಗಡಿಲಿಂಗದಳ್ಳಿ ಗ್ರಾಮದ ರಮೇಶ ಅಲಿಯಾಸ ರಾಮ್ಯಾ 2021ರಲ್ಲಿ ಪರಾರಿಯಾಗಿದ್ದ. ಕಳೆದ ಮೂರು ವರ್ಷದಿಂದ ಅಪರಾಧಿಯ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದರು. ಗುರುವಾರ ಕೆಲಸ ಮುಗಿಸಿಕೊಂಡು ವಾಪಸ್ ಬರುವಾಗ ಬಂಧಿಸಲಾಗಿದೆ. 2011 ರಲ್ಲಿ ಪೋಕ್ಸೊ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರಮೇಶನಿಗೆ, 2019 ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts