More

    ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ: ಧ್ವಜಾರೋಹಣಕ್ಕೆ ಯತ್ನ, 15 ಕ್ಕೂ ಹೆಚ್ಚು ಮಂದಿ ಬಂಧನ

    ಕಲಬುರಗಿ: ಕನ್ನಡ ರಾಜ್ಯೋತ್ಸವ ದಿನದಂದೇ ಪ್ರತ್ಯೇಕ ಕರ್ನಾಟಕ ಕೂಗು ಕೇಳಿಬಂದಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಇಂದು (ನ.1) ಪ್ರತಿಭಟನೆ ನಡೆಸುತ್ತಿದೆ.

    ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದಲ್ಲದೆ, ಕಲಬುರಗಿಯ ಎಸ್​ವಿಪಿ ವೃತ್ತದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದವರನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ನಗರದ ಜಿಲ್ಲಾ ನ್ಯಾಯಾಲಯದಿಂದ ಎಸ್​ವಿಪಿ ವೃತ್ತದವರೆಗೆ ಮೆರವಣಿಗೆ ಮೂಲಕ ತೆರಳಿ ಪ್ರತ್ಯೇಕ ಧ್ವಜಾರೋಹಣಕ್ಕೆ ಸಮಿತಿಯ ಸದಸ್ಯರು ಮುಂದಾದರು. ಈ ವೇಳೆ 15 ಕ್ಕೂ ಹೆಚ್ಚು ಹೋರಾಟಗಾರರನ್ನು ಬಂಧಿಸಿ ಪೊಲೀಸರು ಕರೆದೊಯ್ದಿದ್ದಾರೆ.

    ರಾಜ್ಯ ಸರ್ಕಾರದಿಂದ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಆರೋಪಗಳು ಕೇಳಿಬಂದಿದೆ. ಕೆಕೆಆರ್​ಡಿಬಿ ಅನುದಾನವನ್ನು ಕಲ್ಯಾಣ ಕರ್ನಾಟಕ ಹೊರತುಪಡಿಸಿದ ಜಿಲ್ಲೆಗಳಿಗೆ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ ಎಂದು ಹೋರಾಟ ಸಮಿತಿ ಆಕ್ರೋಶ ಹೊರಹಾಕಿದೆ.

    ಪ್ರತಿಭಟನಾಕಾರರು ದಿವಗಂಥ ವೈಜನಾಥ್ ಪಾಟೀಲ್ ಹಾಗೂ ಉಮೇಶ್ ಕತ್ತಿ ಅವರ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದರು. (ದಿಗ್ವಿಜಯ ನ್ಯೂಸ್​)

    ಲವ್​ ಬ್ರೇಕಪ್​ಗೆ ಒಪ್ಪದ ಪ್ರಿಯಕರನಿಗೆ ವಿಷವುಣಿಸಿದ ಪ್ರೇಯಸಿ! ಸಾಯೋ ಮುನ್ನ ಯುವಕ ಆಡಿದ ಮಾತು ಮನಕಲಕುವಂತಿದೆ

    ಮೊರ್ಬಿ ಸೇತುವೆ ಕುಸಿತ ಪ್ರಕರಣ: ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆ, 9 ಜನರ ಬಂಧನ

    ಹೊಸಬರ ‘ಅಲೆಗಳಿಲ್ಲದ ಸಾಗರ’; ನಿರ್ದೇಶಕ ಸಾಗರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts