ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗಿದ ಯುವತಿಗಾಗಿ ಮಾರ್ಗ ಮಧ್ಯಯೇ ಕಾದಿದ್ದ ಜವರಾಯ!

Girl
Published on

ಕಲಬುರಗಿ: ಸ್ಕೂಟರ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಯುವತಿಯೊಬ್ಬಳು ದುರಂತ ಸಾವಿಗೀಡಾಗಿರುವ ಘಟನೆ ಶಹಬಾದ್ ತಾಲ್ಲೂಕಿನ ನಂದೂರ್ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ನಡೆದಿದೆ.

ಬಂಕೂರ್ ಗ್ರಾಮದ ನಿವಾಸಿ ಪ್ರಿಯಾ(24) ಮೃತ ಯುವತಿ. ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.

ಡಿಕ್ಕಿಯ ರಭಸಕ್ಕೆ ಸ್ಕೂಟರ್​ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಯುವತಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ವಾಡಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net