More

    ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು 2ನೇ ಕ್ಲಾಸ್ ವಿದ್ಯಾರ್ಥಿನಿ ಸಾವು

    ಕಲಬುರಗಿ: ಸುರಕ್ಷಿತ ಬಿಸಿಯೂಟ ವಿತರಣೆ ಮಾಡುವುದು ಸಿಬ್ಬಂದಿಯ ಕರ್ತವ್ಯವಾಗಿರುತ್ತದೆ. ಅರಾಜಕತೆಯಿಂದ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು, ಗಂಭೀರವಾದ ಸುಟ್ಟ ಗಾಯಗಳಾಗಿದ್ದ 2ನೇ ತರಗತಿಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
    ಮಹಾಂತಮ್ಮ (6) ಮೃತ ವಿದ್ಯಾರ್ಥಿನಿ. ಸಾಂಬಾರ್ ಪಾತ್ರೆಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ 2ನೇ ತರಗತಿಯ ವಿದ್ಯಾರ್ಥಿನಿ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಳು.
    ನಡೆದಿದ್ದೇನು?: ಅಫಜಲಪುರ ತಾಲೂಕಿನ ಚಿಣಮಗೇರ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ನವೆಂಬರ್ 16ರಂದು ಈ ಘೋರ ದುರಂತ ನಡೆದಿತ್ತು. ವಿದ್ಯಾರ್ಥಿನಿ ಸಾಂಬಾರ್ ಪಾತ್ರೆಗೆ ಬಿದ್ದ ಹಿನ್ನೆಲೆ ಆಕೆಗೆ ಗಂಭೀರವಾದ ಸುಟ್ಟ ಗಾಯಗಳಾಗಿತ್ತು. ಆಕೆಯನ್ನು ಮೊದಲಿಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ದುರ್ಘಟನೆಯ ಹಿನ್ನೆಲೆ ನಿರ್ಲಕ್ಷ್ಯದಡಿ ಶಾಲೆಯ ಮುಖ್ಯ ಅಡುಗೆಯವರು, ಮುಖ್ಯ ಶಿಕ್ಷಕ ಸೇರಿದಂತೆ ಹಲವರನ್ನು ಅಮಾನತು ಮಾಡಲಾಗಿದೆ. 
    ನಿನ್ನೆಯಷ್ಟೇ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಸುರಕ್ಷಿತ ಬಿಸಿಯೂಟ ವಿತರಣೆ ಮಾಡದಿರುವುದು ಗಂಭೀರ ಕರ್ತವ್ಯ ಲೋಪಕ್ಕೆ ಪುಟ್ಟ ಜೀವ ಬಲಿಯಾಗಿದೆ.
    https://www.vijayavani.net/icc-world-cup-2023-indian-australian-teams-to-savour-gujarati-delicacies-on-sabarmati-river-cruise

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts