ವಾರಕ್ಕೊಮ್ಮೆ ಊರಲ್ಲಿ ಠಿಕಾಣಿ ಹೂಡಿ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಕಲಬುರಗಿ: ಗ್ರಾಮೀಣ ಭಾಗದ ಸಮಸ್ಯೆಗಳನ್ನು ಅರಿತು ಸಾಧ್ಯವಾದರೆ ಸ್ಥಳದಲ್ಲೇ ಪರಿಹಾರಿಸಲು ಮತ್ತು ಜನರ ನೋವುಗಳಿಗೆ ಸ್ಪಂದಿಸಲು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ವಾರಕ್ಕೊಮ್ಮೆ ಒಂದು ಹಳ್ಳಿಯಲ್ಲಿ ಠಿಕಾಣಿ ಹೂಡಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
ವಿಕಾಸ ಭವನ ಸಭಾಂಗಣದಲ್ಲಿ ಸೋಮವಾರ ಮುಂದುವರಿದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ಹಳ್ಳಿಗರ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿ ಗ್ರಾಮೀಣ ಭಾಗದಲ್ಲಿ ತಿಂಗಳಿಗೊಮ್ಮೆ ಜನಸ್ಪಂದನ ನಡೆಸಲು ಆದೇಶಿಸಲಾಗಿದೆ. ಹಳ್ಳಿ ಠಿಕಾಣಿ ಹೂಡಲು ಡಿಸಿ ಹಾಗೂ ಸಿಇಒ ತಮ್ಮ ಅಧೀನ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದರು.
ಜಿಲ್ಲೆಯ 6 ತಾಲೂಕು ಬರಪೀಡಿತ ಘೋಷಿಸಲಾಗಿದ್ದು, 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಆಯಾ ಕ್ಷೇತ್ರದ ಶಾಸಕರು ಟಾಸ್ಕ್​ ಫೋರ್ಸ್​ ಸಮಿತಿ ಸಭೆ ನಡೆಸಿ ಕುಡಿವ ನೀರಿನ ಯೋಜನೆ ರೂಪಿಸಬೇಕು. ಜಿಲ್ಲೆಯ 300ಕ್ಕೂ ಹೆಚ್ಚಿನ ಹಳ್ಳಿಗಳಲ್ಲಿ ಸಮಸ್ಯೆಯಾಗಬಹುದು. ಹೀಗಾಗಿ ಈಗಿನಿಂದಲೇ ಎಚ್ಚರಿಕೆ ವಹಿಸಿ. ಆಳಂದ ತಾಲೂಕು ಬರಪೀಡಿತ ಘೋಷಿಸಲು ಸರ್ಕಾರ ಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಬೋರ್ವೆಲ್ ಕೊರೆಸುವುದರ ಜತೆಗೆ ಅಗತ್ಯವಿದ್ದ ಕಡೆ ಟ್ಯಾಂಕರ್ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು. ಅನುದಾನ ಬಳಕೆಯಲ್ಲಿ ಪಾರದರ್ಶಕತೆ ಇರಬೇಕು. ಟ್ಯಾಂಕರ್ನವರು ಕೊಡುವ ಲೆಕ್ಕವನ್ನು ಕೂಲಂಕಷ ಪರಿಶೀಲಿಸಿಯೇ ಬಿಲ್ ಪಾವತಿಸಬೇಕು ಎಂದು ತಾಕೀತು ಮಾಡಿದರು.
ಹಳ್ಳಿಗಳಲ್ಲಿ ಜನರ ಜೀವಕ್ಕೆ ಅಪಾಯ ತರುವ ಓವರ್ಹೆಡ್ ಟ್ಯಾಂಕ್ಗಳನ್ನು ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಲು ಯೋಜನೆ ಹಾಕಿಕೊಳ್ಳಿ. ಅಬಕಾರಿ ಇಲಾಖೆಯವರು ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದರು.
ಶಾಸಕರಾದ ಡಾ.ಉಮೇಶ ಜಾಧವ್, ಎಂ.ವೈ.ಪಾಟೀಲ್, ಸುಭಾಷ ಗುತ್ತೇದಾರ್, ಜಿಪಂ ಅಧ್ಯಕ್ಷೆ ಸುವರ್ಣ ಹಣಮಂತ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್, ಜಿಲ್ಲಾಧಿಕಾರಿ ವೆಂಕಟೇಶಕುಮಾರ, ಸಿಇಒ ಹೆಪ್ಸಿಬಾರಾಣಿ ಕೊರ್ಲಪಾಟಿ, ಎಸ್ಪಿ ಶಶಿಕುಮಾರ, ಸಹಾಯಕ ಆಯುಕ್ತರಾದ ಬಿ.ರಾಚಪ್ಪ, ಡಾ.ಬಿ.ಸುಶೀಲಾ ಇತರರಿದ್ದರು.

ಗುತ್ತೇದಾರ್ರಿಂದ ವಿದ್ಯುತ್ ಕಳವು ತನಿಖೆ ನಡೆಸಿ ವರದಿ ಸಲ್ಲಿಸಿ: ಅಫಜಲಪುರ ತಾಲೂಕಿನ ದಿಕ್ಸಂಗಾ ಹೊರವಲಯದಲ್ಲಿ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಸೇರಿದ ಹೊಲದಲ್ಲಿ ದೇವಾಲಯ ಹೆಸರಿನಲ್ಲಿ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕವನ್ನು ಅಕ್ರಮವಾಗಿ ಪಡೆದು ವಿದ್ಯುತ್ ಕಳ್ಳತನ ಮಾಡಿರುವ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ  ಸೂಚನೆ ನೀಡಿದ್ದಾರೆ. ದಿಕ್ಸಂಗಾ ಬಳಿ ನಿಯಮ ಉಲ್ಲಂಘಿಸಿ ವಿದ್ಯುತ್ ಸಂಪರ್ಕ ಪಡೆಯಲಾಗಿದೆ ಎಂಬ ಬಗ್ಗೆ ಸಭೆಯಲ್ಲಿ ಶಾಸಕ ಎಂ.ವೈ.ಪಾಟೀಲ್ ಗಮನ ಸೆಳೆದಾಗ ದಿಗ್ಭ್ರಮೆ ವ್ಯಕ್ತಪಡಿಸಿದ ಸಚಿವರು, ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ಬರದೆ ಹೇಗೆ ಸಂಪರ್ಕ ಕಲ್ಪಿಸಲಾಯಿತು ಎಂದು ಖಾರವಾಗಿ ಪ್ರಶ್ನಿಸಿದರು. ಸಂಗಮ ಮತ್ತು ದೇವಲಗಾಣಗಾಪುರದಲ್ಲಿ ಎಂದು ಎಸ್ಟಿಮೇಟ್ ಮಾಡಿ ಬೇರೆಡೆ ಹೇಗೆ ಕೆಲಸ ಮಾಡಲಾಯಿತು? ಅನುಮೋದನೆ ನೀಡಿದವರು ಯಾರು? ಜೆಇ, ಇಇ ಗಮನಕ್ಕೆ ಬಂದಿಲ್ಲವೆ? ನಿಮ್ಮ ಜಾಗೃತ ದಳದವರು ಏನು ಮಾಡುತ್ತಿದ್ದರು? ಇಷ್ಟಕ್ಕೂ ಜೆಸ್ಕಾಂ ಸಹಕಾರವಿಲ್ಲದೆ ಇಂತಹ ಕೆಲಸ ನಡೆಯಲು ಸಾಧ್ಯವಿಲ್ಲ. ಯಾರು ತಪ್ಪು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಿ ಎರಡು ವಾರದಲ್ಲಿ ಸಮಗ್ರ ವರದಿ ಸಲ್ಲಿಸಬೇಕು. ನಿರ್ಲಕ್ಷಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ವಿದ್ಯುತ್ ಸಂಪರ್ಕ ಬಳಿಕ ಗಂಗಾ ಕಲ್ಯಾಣ ಬಿಲ್: ಗಂಗಾಕಲ್ಯಾಣ ಯೋಜನೆಯಡಿ ಕೊರೆದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಜೆಸ್ಕಾಂನಲ್ಲಿ ನೋಂದಣಿ ಮಾಡಿದ ಬಳಿಕವೇ ಬಿಲ್ ಪಾವತಿಸಲು ಸಚಿವ ಪ್ರಿಯಾಂಕ್ ಸೂಚನೆ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ ಇಲಾಖೆ ಅಡಿ ಹಲವು ನಿಗಮ, ನೀರಾವರಿ ಇಲಾಖೆಯಿಂದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಎಲ್ಲರೂ ಸೇರಿ ಸಮಾಜ ಕಲ್ಯಾಣ ಇಲಾಖೆ ಜೆಡಿ ನೇತೃತ್ವದಲ್ಲಿ ಸಭೆ ನಡೆಸಿ ಬಾಕಿ ಉಳಿದಿರುವ ಎಲ್ಲ ಮೂರು ತಿಂಗಳಲ್ಲಿ ಕಾಮಗಾರಿ ಮುಗಿಸಿ ಸಂಪರ್ಕ ಕೊಡಿ ಎಂದು ತಾಕೀತು ಮಾಡಿದರು.

‘ಸಮಾಜ ಕಲ್ಯಾಣ ಇಲಾಖೆಗೆ ಅನುದಾನ ವಾಪಸ್: ಎಸ್ಸಿಪಿ ಟಿಎಸ್ಪಿ ಅನುದಾನದಡಿ ಕೈಗೆತ್ತಿಕೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ನಿಮರ್ಾಣಕ್ಕೆ ಬಿಡುಗಡೆ ಮಾಡಿರುವ ಅನುದಾನ ಇನ್ನೂ ಬಳಸಿಕೊಳ್ಳದ್ದರಿಂದ ಅಧಿಕಾರಿಗಳ ವಿರುದ್ಧ ಹರಿಹಾಯ್ದ ಸಚಿವ ಪ್ರಿಯಾಂಕ್, ನಾಲ್ಕು ವರ್ಷ ಕಳೆದರೂ ಯೋಜನೆ ಪೂರ್ಣಗೊಂಡಿಲ್ಲವೇಕೆ ಎಂದು ತರಾಟೆಗೆ ತೆಗೆದುಕೊಂಡರು. 2016-17ಕ್ಕಿಂತ ಮೊದಲು ಬಿಡುಗಡೆಯಾದ ಅನುದಾನವನ್ನು ಮರಳಿ ಸಮಾಜ ಕಲ್ಯಾಣ ಇಲಾಖೆಗೆ ಪಡೆಯಲಾಗುವುದು. ಈ ಕುರಿತು ಶೀಘ್ರವೇ ಸುತ್ತೋಲೆ ಹೊರಡಿಸುವಂತೆ ಇಲಾಖೆ ಪ್ರಧಾನ ಕಾರ್ಯದಶರ್ಿ ವೆಂಕಟಯ್ಯ ಅವರಿಗೆ ತಿಳಿಸುವುದಾಗಿ ಹೇಳಿದರು.

ನೀರಿನ ಕೆಲಸ ಮಾಡದಿದ್ದರೂ ಬಿಲ್ ಪಾವತಿಗೆ ಕಿಡಿ: ಜಿಲ್ಲೆಯಲ್ಲಿ ಅಧಿಕಾರಿಗಳು ಜನರಿಗಾಗಿಯೋ ಇಲ್ಲವೆ ಗುತ್ತಿಗೆದಾರರ ಪರವಾಗಿ ಕೆಲಸ ಮಾಡುತ್ತಿದ್ದಾರೆಯೋ ಎಂಬುದು ತಿಳಿಯುತ್ತಿಲ್ಲ. ಹಲವೆಡೆ ಕಳಪೆ ಕಾಮಗಾರಿ ಮಾಡಿದ್ರೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ್ದಕ್ಕೆ ಸಚಿವ ಖರ್ಗೆ ಸಿಡಿಮಿಡಿಗೊಂಡರು. ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ದೇವಲಗಾಣಗಾಪುರ, ಚೌಡಾಪುರ, ಭೈರಾಮಡಗಿ ಜತೆ ಜೇವರ್ಗಿ ತಾಲೂಕು ಇತರೆಡೆ ಕಾಮಗಾರಿ ಮಾಡದೆ ಹೇಗೆ ಬಿಲ್ ಪಾವತಿಸಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು. ಉತ್ತರಿಸಿದ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ರೇವಣಸಿದ್ದಪ್ಪ, ಕುಡಿಯುವ ನೀರಿನ ಕಾಮಗಾರಿಯಲ್ಲಿ ಕಳಪೆ ಆಗಿದ್ದು ಗಮನಕ್ಕೆ ಬಂದ ಬಳಿಕ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿತ್ತು. ಅವರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾರೆ ಎಂದು ತಿಳಿಸಿದರು. ಕಪ್ಪು ಪಟ್ಟಿಗೆ ಸೇರಿಸಿದರೆ ಸಾಲದು, ಕಠಿಣ ಕ್ರಮಕ್ಕೆ ಮುಂದಾಗಬೇಕು. ಆರಂಭವಾಗದ ಕಾಮಗಾರಿಗಳನ್ನು ಶಾಸಕರ ಗಮನಕ್ಕೆ ತಂದು ಬೇರೆಡೆ ಸ್ಥಳಾಂತರಿಸಿ ಎಂದು ಸೂಚಿಸಿದರು. ಇದಕ್ಕೆ ಧ್ವನಿಗೂಡಿಸಿದ ಶಾಸಕ ಡಾ.ಉಮೇಶ ಜಾಧವ್, ಕುಡಿಯುವ ನೀರಿನ ಯೋಜನೆಗಳ ಅಕ್ರಮ ಬಗ್ಗೆ ವಿಶೇಷ ಲೆಕ್ಕಪರಿಶೋಧನೆ ಮಾಡಿದರೆ ನೀವೆಲ್ಲ (ಅಧಿಕಾರಿಗಳು) ಜೈಲಿಗೆ ಹೋಗುತ್ತೀರಿ ಎಂದು ಎಚ್ಚರಿಸಿದರು.

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....