ಕಳಚಿದ ಬಸ್ ಚಕ್ರ, ಪ್ರಯಾಣಿಕರ ಪ್ರಾಣ ಉಳಿಸಿದ ಚಾಲಕ

ಕುಮಟಾ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನ ಚಕ್ರದ ಹಬ್ ಕಳಚಿಬಿದ್ದು, ಕೆಲಕಾಲ ಪ್ರಯಾಣಿಕರು ಆತಂಕಗೊಂಡ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಮಾನೀರ್ ಸಮೀಪ ಭಾನುವಾರ ನಡೆದಿದೆ.

ಕುಮಟಾದಿಂದ ಕಿಮಾನಿ ಕಡೆಗೆ ತೆರಳುತ್ತಿದ್ದ ಬಸ್​ನ ಚಕ್ರ ಕಳಚಿದೆ. ಅಷ್ಟರಲ್ಲಿ ಚಾಲಕ ಬಸ್ ಅನ್ನು ನಿಯಂತ್ರಣಕ್ಕೆ ತಂದು ನಿಲ್ಲಿಸಿದ್ದಾರೆ. ಇದರಿಂದ 16 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. 41 ಲಕ್ಷ ಕಿಮೀ. ಓಡಿದ ಹಳೇ ಡಕೋಟಾ ಬಸ್​ಗಳನ್ನು ಗ್ರಾಮೀಣ ಭಾಗಗಳಿಗೆ ನಿಯೋಜಿಸಲಾಗಿದೆ. ಇದರಿಂದ ಒಂದಲ್ಲ ಒಂದು ಅಪಘಾತ ಸಂಭವಿಸುವ ಮೂಲಕ ಪ್ರಯಾಣಿಕರ ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಿರುವ ಕೆಎಸ್​ಆರ್​ಟಿಸಿಯ ಕುಮಟಾ ಘಟಕದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸುಸ್ಥಿತಿಯಲ್ಲಿರುವ ಬಸ್​ಗಳನ್ನು ಗ್ರಾಮೀಣ ಪ್ರದೇಶಗಳಿಗೆ ಬಿಡಬೇಕೆಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ.