18.5 C
Bangalore
Monday, December 16, 2019

ಉಚಿತ ಇಸಿಜಿ ಯಂತ್ರ ಕೊಡುಗೆ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಲಾದಗಿ: ಗ್ರಾಮೀಣ ಪ್ರದೇಶದ ಜನರಿಗೆ ಹೃದ್ರೋಗಕ್ಕೆ ತಕ್ಷಣ ಸೂಕ್ತ ಮಾರ್ಗದರ್ಶನ ಹಾಗೂ ಚಿಕಿತ್ಸೆ ದೊರೆಯಬೇಕು ಎಂದು ಸದುದ್ದೇಶದಿಂದ ಮಣಿಪಾಲದ ಕಸ್ತೂರಾಬಾ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್ ಅವರು ಆರಂಭಿಸಿರುವ ‘ಕಾರ್ಡಿಯಾಲಜಿ ಎಟ್ ಡೋರ್ ಸ್ಟೆಪ್’(ಸಿಎಡಿ) ಯೋಜನೆ ಕಲಾದಗಿ ಸೇರಿ 10 ಕಡೆ ಅನುಷ್ಠಾನಗೊಂಡು ಜಿಲ್ಲೆಯಲ್ಲಿ ಸದ್ದಿಲ್ಲದೆ ಮಾನವೀಯ ಸೇವೆ ನಡೆೆದಿದೆ.

ದಾನಿಗಳ ನೆರವಿನಿಂದ ಡಾ.ಕಾಮತ್ ಮತ್ತವರ ತಂಡ ಕಲಾದಗಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ಜಿಲ್ಲೆಯ ಮಳಲಿ, ಶಿರೋಳ, ಲೋಕಾಪುರ, ಕುಂದರಗಿ, ಸುತಗುಂಡಾರ, ಕಟಗೇರಿ, ಬೇಲೂರು, ಸಾವಳಗಿ ಹಾಗೂ ಧನ್ನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ವಿತರಿಸಿದ್ದು, ಅದು ಈಗಾಗಲೇ ಕಾರ್ಯಾರಂಭ ಮಾಡಿದೆ.

ವಾಟ್ಸ್‌ಆ್ಯಪ್ ಮೂಲಕ ಮಾರ್ಗದರ್ಶನ
ಜಿಲ್ಲೆಯ ಆರೋಗ್ಯಾಧಿಕಾರಿ ಸೇರಿ 1250 ಕ್ಕೂ ಅಧಿಕ ಹೃದ್ರೋಗ ತಜ್ಞರಿರುವ ‘ಕಾರ್ಡಿಯಾಲಜಿ ಎಟ್ ಡೋರ್ ಸ್ಟೆಪ್’ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ಗೆ ಆಯಾ ವೈದ್ಯರು ಇಸಿಜಿ ಯಂತ್ರದ ವರದಿಯನ್ನು ಹಾಕಿದಾಗ ಅದನ್ನು ಪರಿಶೀಲಿಸುವ ಡಾ.ಕಾಮತ್ ಕೂಡಲೇ ಅದಕ್ಕೆ ಸೂಕ್ತ ಮಾರ್ಗದರ್ಶನ ನೀಡುತ್ತಾರೆ.

ಬೇಕಿದೆ ಇನ್ನಷ್ಟು ಪ್ರಚಾರ
ಇಂತಹದೊಂದು ವ್ಯವಸ್ಥೆ ಇರುವ ಬಗ್ಗೆ ಜಿಲ್ಲೆಯ ಬಹುತೇಕ ಗ್ರಾಮೀಣರಿಗೆ ಮಾಹಿತಿ ಇರದೆ ಇರುವುದು ವಿಪರ್ಯಾಸ. ಯಾರಿಗಾದರೂ ಎದೆನೋವು ಕಾಣಿಸಿಕೊಂಡರೆ ನಗರ ಪ್ರದೇಶಗಳಿಗೆ ಕರೆದೊಯ್ಯಲಾಗುತ್ತದೆ. ಜಿಲ್ಲೆಯಲ್ಲಿ ಈ ವ್ಯವಸ್ಥೆಯನ್ನು ಜನಪ್ರತಿನಿಧಿಗಳ, ಅಧಿಕಾರಿಗಳ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡಿ ಜನರಿಗೆ ಮಾಹಿತಿ ನೀಡಬೇಕು ಎಂಬುದು ಡಾ.ಪದ್ಮನಾಭ ಕಾಮತ್ ಅವರ ಅಪೇಕ್ಷೆ.

ಇಂತಹದೊಂದು ವ್ಯವಸ್ಥೆ ಇರುವ ಬಗ್ಗೆ ಮಾಹಿತಿ ಲಕ, ಬ್ಯಾನರ್, ಕಾರ್ಯಕ್ರಮದ ಮೂಲಕ ಜನರಿಗೆ ಮಾಹಿತಿ ನೀಡಲು ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಮುಂದಾಗಬೇಕಿದೆ. ಹೃದಯವಂತ ವೈದ್ಯರೊಬ್ಬರು ನೀಡುತ್ತಿರುವ ಸೇವೆಯನ್ನು ಗ್ರಾಮೀಣರಿಗೆ ಮುಟ್ಟಿಸಬೇಕಿದೆ.

ಬಾಗಲಕೋಟೆಯೇ ಏಕೆ?
ಮಣಿಪಾಲ ಕಸ್ತೂರಬಾ ಆಸ್ಪತ್ರೆಯಿಂದ 2015 ರಲ್ಲಿ ಬಾಗಲಕೋಟೆಯಲ್ಲಿ ನಡೆದ ಹೃದಯ ತಪಾಸಣಾ ಶಿಬಿರವೊಂದರಲ್ಲಿ 1 ಸಾವಿರಕ್ಕೂ ಅಧಿಕ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. ಅಂದು ಶಿಬಿರಾರ್ಥಿಗಳು ಹೆಚ್ಚಾಗಿದ್ದರಿಂದ ಒಂದು ದಿವಸಕ್ಕೆ ಶಿಬಿರ ಮುಗಿಸದೆ ಎರಡನೇ ದಿನಕ್ಕೆ ಮುಂದೂಡಲಾಗಿತ್ತು. ಇದು ಜಿಲ್ಲಾವಾರು ಗಣತಿಯಲ್ಲಿ ದಾಖಲೆಯೇ ಸರಿ. ಆಮೇಲೆ 15 ಕ್ಕೂ ಅಧಿಕ ಮಕ್ಕಳು ಹೃದಯ ತೊಂದರೆಯಿಂದ ಮಣಿಪಾಲದ ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ಇದನ್ನೆಲ್ಲ ಗಮನಿಸಿ ಪರಿಸ್ಥಿತಿಯನ್ನು ಮನಗಂಡು ಬಾಗಲಕೋಟೆ ಜಿಲ್ಲೆಯ ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಿಗೆ ಇಸಿಜಿ ಯಂತ್ರಗಳನ್ನು ಕೊಟ್ಟು ಹೃದ್ರೋಗಿಗಳಿಗೆ ತಕ್ಷಣ ಮಾರ್ಗದರ್ಶನ ಮಾಡುವ ಯೊಜನೆ ಸಾಕಾರಕ್ಕೆ ನಾವು ಮುಂದಾಗಬೇಕಾಯಿತು ಎನ್ನುತ್ತಾರೆ ಸಿಎಡಿ ಯೋಜನೆ ರುವಾರಿ ಡಾ.ಪದ್ಮನಾಭ ಕಾಮತ್ ಹೇಳಿದರು.

ಡಾ.ಕಾಮತ್ ಅವರಿಂದ ನಮ್ಮ ಜಿಲ್ಲೆಗೆ ಸಿಕ್ಕ ಬಹುದೊಡ್ಡ ಮಾನವೀಯ ಸೇವೆ ಇದು. ಖಂಡಿತ ಗ್ರಾಮೀಣ ಪ್ರದೇಶದವರಿಗೆ ಸಾಕಷ್ಟು ಅನುಕೂಲವಾಗಲಿದೆ. ವಿವಿಧ ಕೆಲಸಗಳ ಒತ್ತಡದಿಂದ ಈ ಯೋಜನೆಗೆ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ, ಶಾಸಕರ ಸಮ್ಮುಖದಲ್ಲಿ ಜಿಲ್ಲಾಡಳಿತ ವತಿಯಿಂದ ಆದಷ್ಟು ಬೇಗ ಚಾಲನೆಗೊಳಿಸಿ ಸಾರ್ವಜನಿಕರಿಗೆ ಈ ಯೋಜನೆ ಬಗ್ಗೆ ಮಾಹಿತಿ ನೀಡಲಾಗುವುದು.
ಡಾ.ಎಂ.ವಿ. ದೇಸಾಯಿ, ಜಿಲ್ಲಾ ಆರೋಗ್ಯಾಧಿಕಾರಿ ಬಾಗಲಕೋಟೆ

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...