ಹುಬ್ಬಳ್ಳಿ: ಎರಡು ಲಾರಿಗಳ ನಡುವೆ ಸಂಭವಿಸಿದ ಅಪಘಾತದಿಂದ ಬೆಂಕಿ ಉಂಟಾಗಿ ಚಾಲಕ ಸಜೀವ ದಹನವಾಗಿರುವ ಘಟನೆ ಕಲಘಟಗಿ ತಾಲೂಕಿನ ದೇವಿಕೊಪ್ಪದಲ್ಲಿ ನಡೆದಿದೆ.
ಸಜೀವನಗೊಂಡ ಚಾಲಕನ ಹೆಸರು ಪತ್ತೆಯಾಗಿಲ್ಲ. ಆದರೆ ಚಾಲಕ ಯಲ್ಲಾಪುರದವರು ಎಂಬ ಮಾಹಿತಿ ಲಭ್ಯವಾಗಿದೆ.
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಚಲಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದರು.
ಕಲಘಟಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್)