More

    ಕಲಾಕ್ಷೇತ್ರ ಮಾದರಿ ನಾಲ್ಕು ರಂಗಮಂದಿರ, ಎಲ್ಲೆಲ್ಲಿ ?

    ಬೆಂಗಳೂರು: ರಾಜಧಾನಿಯಲ್ಲಿ ವರ್ಷಪೂರ್ತಿ ಸಾಂಸ್ಕತಿಕ ಚಟುವಟಿಕೆಗಳು ನಡೆಯಲು ಅನುಕೂಲವಾಗುವಂತೆ ನಗರದ ನಾಲ್ಕು ಕಡೆ ನಿರ್ಮಿಸಲು ಉದ್ದೇಶಿಸಿರುವ ರವೀಂದ್ರ ಕಲಾಕ್ಷೇತ್ರ ಮಾದರಿಯ ರಂಗಮಂದಿರಗಳಿಗೆ ಒಂದು ವಾರದೊಳಗೆ ನಿವೇಶನ ಗುರುತಿಸಿ ಹಸ್ತಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ರಂಗಮಂದಿರ ನಿರ್ಮಾಣ ಸಂಬಂಧ ವಿಧಾನಸೌಧದಲ್ಲಿ ಬಿಡಿಎ, ಬಿಬಿಎಂಪಿ, ಬೆಂಗಳೂರು ನಗರ, ಬೆ.ಗ್ರಾಮಾಂತರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿ ರಂಗಮಂದಿರ ನಿರ್ಮಿಸಲು ಸೂಕ್ತ ಸ್ಥಳದಲ್ಲಿ ಒಂದು ವಾರದೊಳಗೆ ನಿವೇಶನ ಗುರುತಿಸಿ ಹಸ್ತಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಹೆಸರು ನಾಮನಿರ್ದೇಶನ !

    ಈಗಾಗಲೇ ವಿಶ್ವೇಶ್ವರಯ್ಯ ಲೇಔಟ್‍ನಲ್ಲಿ ಎರಡೂವರೆ ಎಕರೆ, ದೇವನಹಳ್ಳಿಯ ಕಸಬಾ ಹೋಬಳಿ, ಕುನ್ನಹಳ್ಳಿ ಬಳಿ ಐದು ಎಕರೆ, ಕೆಐಎಡಿಬಿ, ಕೆಹೆಚ್‍ಬಿಯಲ್ಲಿ ಸಾರ್ವಜನಿಕರಿಗೆ ಮೀಸಲಿಟ್ಟ ಸಿಎ ನಿವೇಶನಗಳನ್ನು ರಂಗಮಂದಿರ ನಿರ್ಮಾಣಕ್ಕೆ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

    ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ತೀವ್ರ ಮುಖಭಂಗ: ಕಂಗನಾ ಕಚೇರಿ ತೆರವಿಗೆ ಬಾಂಬೈ ಹೈಕೋರ್ಟ್​ ತಡೆ!

    ನಗರದಲ್ಲಿ ಒತ್ತುವರಿ ಮಾಡಿಕೊಂಡಿರುವ ಹಾಗೂ ಕಾನೂನು ತೊಡಕಿಲ್ಲದ ನಿವೇಶನವನ್ನು ಗುರುತಿಸಬೇಕು ಹಾಗೂ ಒಂದು ವಾರದೊಳಗೆ ಹಸ್ತಾಂತರ ಪ್ರಕ್ರಿಯೆ ಮುಗಿಯಬೇಕು. ವಿಳಂಬ ಮಾಡಿದರೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿ ಸಿ.ಟಿ.ರವಿ ಎಚ್ಚರಿಕೆ ನೀಡಿದರು.

    ಇದನ್ನೂ ಓದಿ: ರೈಲ್ವೆ ಟಿಕೆಟ್ ಕನ್​ಫರ್ಮ್ ಮಾಡ್ತಾ ಇದ್ದ ‘ರಿಯಲ್ ಮ್ಯಾಂಗೋ’ ಆರ್​ಪಿಎಫ್ ಬಲೆಗೆ

    ಕಳೆದ ಬಜೆಟ್‍ನಲ್ಲಿ ನಾಡುನುಡಿ, ಸಂಸ್ಕೃತಿ, ಭಾಷೆ, ಜನಪದ ಬೆಳವಣಿಗೆಗಳಿಗೆ ಅನುಕೂಲವಾಗುವಂತೆ ನಗರದ ನಾಲ್ಕು ದಿಕ್ಕಿನಲ್ಲಿ ರವೀಂದ್ರ ಕಲಾಕ್ಷೇತ್ರ ಮಾದರಿಯಲ್ಲಿ ರಂಗಮಂದಿರ ನಿರ್ಮಿಸಲು 60 ಕೋಟಿ ಹಣವನ್ನು ಘೋಷಿಸಲಾಗಿದೆ ಎಂದು ಹೇಳಿದರು.
    ನಾಲ್ಕು ದಿಕ್ಕುಗಳಲ್ಲಿ ರಂಗಮಂದಿರವನ್ನು ನಿರ್ಮಿಸಲು ಸಮಗ್ರ ಯೋಜನಾ ವರದಿ(ಡಿಪಿಎಆರ್)ಯನ್ನು ಸಿದ್ದಪಡಿಸಬೇಕು, ಎರಡು ಎಕರೆಯಿಂದ ಐದು ಎಕರೆಗಳವರೆಗಿನ ಸ್ಥಳದಲ್ಲಿ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

    ಅನ್ಯಾಯದ ವಿರುದ್ಧ ಸಿಡಿದೆದ್ದ ಆಟೋ ಡಾಕ್ಟರ್ ಈಗ ಕುಟುಂಬ ಕಲ್ಯಾಣಾಧಿಕಾರಿ

     

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts