ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಕಳತ್ತೂರು ಪಾದೂರು ಬ್ರಹ್ಮಬೈದರ್ಕಳ ಗರಡಿ 2.65ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ವಿಜ್ಞಾಪನಾ ಪತ್ರವನ್ನು ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ ಭಾನುವಾರ ಬಿಡುಗಡೆಗೊಳಿಸಿದರು.
ಬ್ರಹ್ಮಬೈದೆರ್ಕಳರ ಸಾನ್ನಿಧ್ಯದಲ್ಲಿ ಪೂಜೆ ಹಾಗೂ ಸಾಮೂಹಿಕ ಪ್ರಾರ್ಥನೆ ನೆರವೇರಿಸಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯಕೃಷ್ಣ ಆಳ್ವ ಪಾದೂರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ಧಾರ ಸಮಿತಿಯ ಗೌರವ ಅಧ್ಯಕ್ಷರಾದ ಜಗದೀಶ ಶೆಟ್ಟಿ ನಡೆಗುತ್ತು, ರವೀಂದ್ರ ಜಿ.ಶೆಟ್ಟಿ ಬರೆಬೆಟ್ಟುಗುತ್ತು, ಕರುಣಾಕರ ಪೂಜಾರಿ ನಟ್ಟಿಲ್, ಸಮಿತಿಯ ಸಲಹೆಗಾರರಾದ ಸುಧಾಕರ ಡಿ.ಅಮೀನ್ ಪಾಂಗಾಳ, ಅರುಣಾಕರ ಡಿ.ಶೆಟ್ಟಿ, ಮಜೂರು ಗ್ರಾಪಂ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಕುತ್ಯಾರು ಗ್ರಾಪಂ ಅಧ್ಯಕ್ಷ ಜನಾರ್ದನ ಆಚಾರ್ಯ, ಶಿರ್ವ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಅಧ್ಯಕ್ಷ ಗೋಪಾಲ ಪೂಜಾರಿ, ಶ್ರೀಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ಟ್ರಸ್ಟಿ ಸಂತೋಷ್ ಕುಮಾರ್ ಬೈರಂಪಳ್ಳಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಂಗನಾಥ ಶೆಟ್ಟಿ ಬರೆಬೈಲು ಗುತ್ತು, ಅರ್ಚಕ ವಿಶ್ವನಾಥ್ ಅಮೀನ್ ಗರಡಿಮನೆ ಉಪಸ್ಥಿತರಿದ್ದರು. ಜತೆ ಕಾರ್ಯದರ್ಶಿ ಸುಕೇಶ್ ಪೂಜಾರಿ ವಳದೂರು ಸ್ವಾಗತಿಸಿದರು. ಅರ್ಚಕ ಗುರುರಾಜ ಪೂಜಾರಿ ಪ್ರಸ್ತಾವನೆಗೈದರು. ಉಪಾಧ್ಯಕ್ಷ ಪ್ರಕಾಶ್ ಪಾಲಮೆ ವಂದಿಸಿದರು. ಜತೆ ಕಾರ್ಯದರ್ಶಿ ಅತಿಥ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.
