

ಕಲಬುರಗಿ: ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದ ಬಳಿ ಸೋಮವಾರ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸಕ್ಕೆ ಮೂವರು ದುರ್ಮರಣಕ್ಕೀಡಾಗಿದ್ದಾರೆ.
ಭೀಮಾಶಂಕರ್ ಪ್ಯಾಟಿ, ಅಕ್ಬರ್ ಪಟೇಲ್ ಮತ್ತು 18 ವರ್ಷದ ಯುವತಿ ಸೇರಿ ಮೂವರು ಮೃತಪಟ್ಟಿದ್ದಾರೆ. ಈ ಮೂವರು ಕುಳಿತಿದ್ದ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ದುರಂತ ಅಂತ್ಯಕಟ್ಟಿದ್ದಾರೆ.
ಮೂವರ ಮೃತದೇಹಗಳು ರಕ್ತಸಿಕ್ತವಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬೈಕ್ ನಜ್ಜುಗುಜ್ಜಾಗಿದೆ. ಈ ಭೀಕರ ದೃಶ್ಯ ಕಂಡ ಇತರ ವಾಹನ ಸವಾರರು ಮತ್ತು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ವಾಡಿ ಠಾಣೆಯ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.