More

    ನೊಂದ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿ

    ಕಲಕೇರಿ: ಬಸವನಬಾಗೇವಾಡಿ ತಾಲೂಕಿನ ಕುದರಿಸಾಲವಾಡಗಿ ಗ್ರಾಮದ ಇಬ್ಬರು ಯುವತಿಯರ ಸಾವಿನ ಕುರಿತು ಕೂಡಲೇ ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ 25 ಲಕ್ಷ ರೂಗಳ ಪರಿಹಾರ ಘೋಷಿಸಬೇಕೆಂದು ಒತ್ತಾಯಿಸಿ ಗ್ರಾಮದ ವಿವಿಧ ಪ್ರಗತಿಪರ ಸಂಘಟನೆ ಮುಖಂಡರು ಹಾಗೂ ಗ್ರಾಮಸ್ಥರು ಮಂಗಳವಾರ ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ ಹೊಸಕೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸದಿದ್ದರೆ ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು. ಅಮಾನವೀಯ ಕೃತ್ಯವೆಸಗಿದ ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆ ನೀಡುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕೆಂದು ಆಗ್ರಹಿಸಿದರು.

    ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ ಹೊಸಕೇರಿ ಮನವಿ ಸ್ವೀಕರಿಸಿ ಮಾತನಾಡಿ, ಈ ಕುರಿತು ಸೂಕ್ತ ಕ್ರಮಕ್ಕಾಗಿ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

    ಡಾ. ನಂದಕುಮಾರ ಭೈರಿ, ಒಸಿಸಿಐ ಸಂಘಟನೆ ಮಾಧ್ಯಮ ಪ್ರತಿನಿಧಿ ಹಣಮಂತ ವಡ್ಡರ, ಮಡಿವಾಳಪ್ಪ ಮಾದರ ದೊಡಮನಿ, ಎಸ್.ಕೆ. ಜಾಲಹಳ್ಳಿಮಠ, ಅರ್ಜುನ ಮಾದರ, ಮಲ್ಲಿಕಾರ್ಜುನ ಮಾದರ, ಮಡಿವಾಳಪ್ಪ ಮಾದರ, ಮಹಾಂತೇಶ ಮಾದರ, ರಾಜು ಮಾದರ, ಶಾಂತಗೌಡ ಹೊಸಗೌಡರ, ಅನೀಲ ಕಪ್ಪಡಿಮಠ, ಚನ್ನು ಯಾಳವಾರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts