More

    ಈ ಫಾರ್ಮೆಟ್​ನಲ್ಲಿ ರಿಲೀಸ್ ಆಗಲಿದೆ ಬಹುನಿರೀಕ್ಷಿತ ‘ಕಲ್ಕಿ 2898 ಎಡಿ’ ಸಿನಿಮಾ?

    ಆಂಧ್ರಪ್ರದೇಶ: ಈ ಹಿಂದಿನಿಂದಲೂ ಸಿನಿಪ್ರೇಕ್ಷಕರಲ್ಲಿ ಭಾರೀ ಕುತೂಹಲ ಕೆರಳಿಸಿರುವ ಟಾಲಿವುಡ್​ ರೆಬೆಲ್ ಸ್ಟಾರ್​ ಪ್ರಭಾಸ್ ನಟನೆಯ ಪ್ಯಾನ್ ಇಂಡಿಯಾ ‘ಕಲ್ಕಿ 2898 ಎಡಿ’ ಸಿನಿಮಾದ ಚಿತ್ರೀಕರಣ ಇದೀಗ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು, ಇದೇ ಜೂನ್​ 27ರಂದು ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಇದರ ಮಧ್ಯೆ ಇತ್ತೀಚೆಗಷ್ಟೇ ಚಿತ್ರತಂಡ ಬುಜ್ಜಿ ಕಾರನ್ನು ಪರಿಚಯಿಸಿದ ರೀತಿ ಕಂಡು, ಫ್ಯಾನ್ಸ್ ಭಾರೀ​ ಆಶ್ಚರ್ಯಚಕಿತರಾಗಿದ್ದಾರೆ.

    ಇದನ್ನೂ ಓದಿ: ರಾಜ್ಯದಲ್ಲಿ ತಾಂಡವವಾಡುತ್ತಿರುವ ಹರಾಜಕತೆ: ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಟೀಕೆ

    ತಮಗೆ ಬೇಕಾದ ರೀತಿಯಲ್ಲಿ ಬುಜ್ಜಿ ಕಾರನ್ನು ವಿನ್ಯಾಸಗೊಳಿಸಿರುವ ಕಲ್ಕಿ ಚಿತ್ರತಂಡ, ಈ ಮೂಲಕ ಸಿನಿರಸಿಕರನ್ನು ಮಾತ್ರವಲ್ಲದೇ ಉದ್ಯಮಿಗಳು, ರಾಜಕಾರಣಿಗಳ ಗಮನಸೆಳೆಯುವಲ್ಲಿ ಯಶಸ್ವಿಯಾಗಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಟಾಲಿವುಡ್​ನ ಸೈನ್​-ಫಿಕ್ಷನ್​ ಚಿತ್ರ ಇದಾಗಿದ್ದು, ಭಾರತ ಮಾತ್ರವಲ್ಲದೇ ವಿದೇಶದಲ್ಲಿಯೂ ಏಕಕಾಲಕ್ಕೆ ತೆರೆಕಾಣಲಿದೆ. ಸದ್ಯ ‘ಕಲ್ಕಿ 2898 ಎಡಿ’ ಚಿತ್ರವು 3ಡಿ ಫಾರ್ಮೆಟ್​ನಲ್ಲಿಯೂ ರಿಲೀಸ್ ಆಗಲಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದ್ದು, ಈ ಬಗ್ಗೆ ಚಿತ್ರತಂಡ ಏನು ಹೇಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

    ಬಹುನಿರೀಕ್ಷಿತ ಸೈನ್ಸ್​-ಫಿಕ್ಷನ್ ಚಿತ್ರವನ್ನು ನಾಗ್ ಅಶ್ವಿನ್ ನಿರ್ದೇಶಿಸಿದ್ದು, ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವೈಜಯಂತಿ ಮೂವೀಸ್ ಅಡಿಯಲ್ಲಿ ಅಶ್ವಿನಿ ದತ್ ಈ ಚಿತ್ರವನ್ನು ನಿರ್ಮಿಸಿದ್ದು, ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿದ್ದಾರೆ,(ಏಜೆನ್ಸೀಸ್).

    ಇವರಿಬ್ಬರಿಲ್ಲ ಅಂದ್ರೆ IPL​ಗೆ ಕಳೆಯೇ ಇಲ್ಲ! ಮುಂದೆ ಯಾರೂ ಹೀಗೆ ಹುಚ್ಚೆದ್ದು ನೋಡೋದಿಲ್ಲ: ನವಜೋತ್ ಸಿಂಗ್ ಸಿಧು

    ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts