ರಾಯಚೂರು: ಮುಸ್ಲಿಂ ಮಹಿಳೆಯರ ಅವಹೇಳನ ಮಾಡಿರುವ ಆರ್‌ಎಸ್‌ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು. ಕಾಂತರಾಜು ಆಯೋಗದ ವರದಿ ಅಂಗೀಕರಿಸುವಂತೆ ಒತ್ತಾಯಿಸಿ ಜ.19ರಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್ ತಿಳಿಸಿದರು.
ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ರಾಯಚೂರಿನಲ್ಲಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ಪ್ರತಿಭಟನೆ ನಡೆಸಲಾಗುವುದು ಎಂದರು. ಪದಾಧಿಕಾರಿಗಳಾದ ಸುರೇಶ ಬಳಗಾನೂರು, ತುರುಮಂದೆಪ್ಪ ಕಟ್ಟಿಮನಿ, ಶಿವಪ್ಪ ಪಲಕನಮರಡಿ, ರಂಗರಾಜ ನಾಯಕ, ಅಬ್ದುಲ್ ಗನಿ ಉಪಸ್ಥಿತರಿದ್ದರು.