ಮಂಗಳೂರು: ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ಮಾಡುವುದನ್ನು ವಿರೋಧಿಸಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಕನಕಪುರ ಚಲೋವನ್ನು ಮಾಜಿ ಸಚಿವ ಯು.ಟಿ.ಖಾದರ್ ವಿರೋಧಿಸಿದ್ದಾರೆ.
ಕನಕಪುರ ಚಲೋ ಹಮ್ಮಿಕೊಂಡಿದ್ದು ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಸಣ್ಣ ಮನಸು ತೋರಿಸುತ್ತದೆ. ದೇವರ ಪ್ರತಿಮೆ ನಿರ್ಮಾಣ ಮಾಡಲು ಅಡ್ಡಿಪಡಿಸುವ ಇವರ ಮನೋಭಾವಕ್ಕೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ ಎಂದರು.
ಶಾಂತಿ-ಸಂದೇಶ ಸಾರಲು ಏಸು ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ. ಕ್ರೈಸ್ತ ಸಮುದಾಯದವರ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳು ಸಮಾಜಕ್ಕೆ ಪೂರಕವಾಗಿವೆ. ಕ್ರೈಸ್ತ ಸಮುದಾಯದವರು ಯಾವುದನ್ನೂ ಮಿಸ್ ಯೂಸ್ ಮಾಡುವುದಿಲ್ಲ.
ದೇಶಭಕ್ತಿ ಎಂದು ಹೇಳುವವರು ನಿರ್ಗತಿಕರನ್ನು ನೋಡುವುದಿಲ್ಲ ಎಂದು ಖಾದರ್ ಹೇಳಿದರು.
ಕಲ್ಲಡ್ಕ ಪ್ರಭಾಕರ್ ಭಟ್ ಕನಕಪುರದ ಸೋದರತೆ ಹಾಳು ಮಾಡುವ ಉದ್ದೇಶದಿಂದ ಅಲ್ಲಿಗೆ ಹೋಗಿದ್ದಾರೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಣ ಮಾಡುವ ಅಗತ್ಯ ಏನಿತ್ತು? ಕನಕಪುರ, ಬೆಂಗಳೂರಿನವರು ಆದರೂ ಶಾಂತಿ, ನೆಮ್ಮದಿಯಿಂದ ಇರಲಿ. ಇಲ್ಲಿ ನಾವು ನರಕ ಅನುಭವಿಸುತ್ತಿರುವುದು ಸಾಕು ಎಂದು ವಾಗ್ದಾಳಿ ನಡೆಸಿದರು.