More

    ರೈಲ್ವೆ ರಿಯಾಯಿತಿ ಪಾಸ್ ಸೌಲಭ್ಯಕ್ಕೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

    ಶಿವಮೊಗ್ಗ: ಕೇಂದ್ರ ಸರ್ಕಾರ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದ ರಿಯಾಯಿತಿ ಸೌಲಭ್ಯ ಹಿಂಪಡೆದಿರುವುದನ್ನು ವಿರೋಧಿಸಿ ಶಿವಮೊಗ್ಗ ರೈಲ್ವೆ ನಿಲ್ದಾಣದ ಎದುರು ಸೋಮವಾರ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.
    70 ವರ್ಷ ವಯೋಮಿತಿ ದಾಟಿದ ಹಿರಿಯ ನಾಗರಿಕರಷ್ಟೇ ರೈಲ್ವೆ ಪ್ರಯಾಣದ ಟಿಕೆಟ್ ದರದಲ್ಲಿ ರಿಯಾಯಿತಿ ಸೌಲಭ್ಯ ನೀಡಲು ರೈಲ್ವೆ ಇಲಾಖೆ ಹೊಸ ಆದೇಶ ಹೊರಡಿಸಿರುವುದು ಖಂಡನೀಯ. ಈ ಹಿಂದೆ 58 ವರ್ಷ ಮೇಲ್ಪಟ್ಟವರಿಗೆ ಶೇ.50 ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಶೇ. 60ರಷ್ಟು ರಿಯಾಯಿತಿ ನೀಡಲಾಗುತ್ತಿತ್ತು. ಆದರೆ ಈಗ ಅದನ್ನು ಪರಿಷ್ಕರಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಪರಿಷ್ಕೃತ ನೀತಿಯಲ್ಲಿ ನಾನ್ ಎಸಿ ಸ್ಲೀಪರ್ ಮತ್ತು ಸಾಮಾನ್ಯ ದರ್ಜೆಯ ಪ್ರಯಾಣದಲ್ಲಿ ಮಾತ್ರ ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡಲು ಮುಂದಾಗಿರುವುದು ಸರಿಯಲ್ಲ. ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪನಿಗಳಿಗೆ ಕೋಟ್ಯಂತರ ರೂ. ರಿಯಾಯಿತಿ ನೀಡುತ್ತದೆ. ಆದರೆ ವಯೋವೃದ್ಧರ ಪ್ರಯಾಣದ ರಿಯಾಯಿತಿ ಹಿಂಪಡೆಯುತ್ತದೆ. ಕೂಡಲೇ ಈ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿದರು.
    ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಪ್ರಮುಖರಾದ ಹೊಳೆಮಡಿಲು ವೆಂಕಟೇಶ್, ಡಾ. ಶೇಖರ್ ಗೌಳೇರ್, ಆರ್.ಎ.ಚಾಬೂಸಾಬ್, ಟಿ.ಆರ್.ಕೃಷ್ಣಪ್ಪ, ಸಿ.ಈರಪ್ಪ, ಎನ್.ವರ್ತೇಶ್, ರಾಮಚಂದ್ರ, ನಾಗೇಶ್ ರಾವ್, ಶಂಕ್ರಾನಾಯ್ಕಾ ಮುಂತಾದವರು ಪ್ರತಿಭಟನೆಯಲ್ಲಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts